ಫೆ.೮ರಂದು ರಕ್ತದಾನ, ಉಚಿತ ನೇತ್ರ ತಪಾಸಣಾ ಶಿಬಿರ
ಭದ್ರಾವತಿ : ಹಳೇನಗರ, ಭೂತನಗುಡಿ, ಶ್ರೀ ಕೃಷ್ಣ ರುಕ್ಷ್ಮಿಣಿ ದೇವಸ್ಥಾನದ ಭಾವಸಾರ ಕ್ಷತ್ರಿಯ ಸಮಾಜ ಹಾಗು ಅಂಗ ಸಂಸ್ಥೆಗಳಿಂದ ಫೆ.೮ರ ಭಾನುವಾರ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ಶ್ರೀ ಪಾಂಡುರಂಗ ಮಂದಿರದಲ್ಲಿ ಬೃಹತ್ ರಕ್ತದಾನ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ರೆಡ್ ಕ್ರಾಸ್ ಸಂಜೀವಿನಿ ರಕ್ತ ನಿಧಿ ಕೇಂದ್ರ, ಸ್ಪಂದನ ಹೆಲ್ತ್ ಫೌಂಡೇಷನ್ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಶಿಬಿರದಲ್ಲಿ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ತಪಾಸಣೆ ನಡೆಯಲಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರ ಯಶಸ್ವಿಗೊಳಿಸುವಂತೆ ಕೋರಲಾಗಿದೆ.