ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ನಿವೇಶನ ದಾನ
ಅಂತರಗಂಗೆ ಗ್ರಾಮ ಪಂಚಾಯಿತಿ ದಾನಿಗಳಿಗೆ ಕೃತಜ್ಞತೆ
ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಚಗೊಂಡನಹಳ್ಳಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ನಿವೇಶನ ದಾನ ಮಾಡಿದ ದಾನಿಗಳನ್ನು ಬುಧವಾರ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಗೌರವಿಸುವ ಮೂಲಕ ಕೃತಜ್ಞತೆ ಸಲ್ಲಿಸಲಾಯಿತು.
ಭದ್ರಾವತಿ: ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಚಗೊಂಡನಹಳ್ಳಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ನಿವೇಶನ ದಾನ ಮಾಡಿದ ದಾನಿಗಳನ್ನು ಬುಧವಾರ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಗೌರವಿಸುವ ಮೂಲಕ ಕೃತಜ್ಞತೆ ಸಲ್ಲಿಸಲಾಯಿತು.
ಕಾಚಗೊಂಡನಹಳ್ಳಿ ಗ್ರಾಮದ ನಿವಾಸಿ ರಂಗನಾಥ್ ಬರ್ಗೆಯವರ ಪತ್ನಿ ಮೀನಾಕ್ಷಿಬಾಯಿ ಮತ್ತು ಇವರ ಸಹೋದರಿ ಹೆಸರಿನಲ್ಲಿರುವ ಸುಮಾರು ೬ ಲಕ್ಷ ರು. ಬೆಲೆಬಾಳುವ ೩೦*೪೦ ಅಳತೆಯ ನಿವೇಶನ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ದಾನ ನೀಡಿದ್ದು, ಇದರಿಂದಾಗಿ ಗ್ರಾಮಸ್ಥರಿಗೆ ಹೆಚ್ಚಿನ ಅನುಕೂಲವಾಗಿದೆ.
ಅಗತ್ಯ ಮೂಲ ಸೌಕರ್ಯಗಳಲ್ಲಿ ಒಂದಾಗಿರುವ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ನಿವೇಶನ ದಾನ ಮಾಡಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ರಂಗನಾಥ್ ಬರ್ಗೆ, ಮೀನಾಕ್ಷಿಬಾಯಿ ಮತ್ತು ಇವರ ಸಹೋದರಿಯನ್ನು ಸನ್ಮಾನಿಸಿ ಗೌರವಿಸುವ ಮೂಲಕ ಸ್ಮರಿಸಿದರು.
ಕಾಚಗೊಂಡನಹಳ್ಳಿ ಪಂಚಾಯಿತಿ ಸದಸ್ಯೆ ಬಿ. ಮೋನಿಷ, ಆನಂದಪ್ಪ ಹಾಗು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಸೇರಿದಂತೆ ಎಲ್ಲಾ ಸದಸ್ಯರು ಮತ್ತು ಅಭಿವೃದ್ಧಿ ಅಧಿಕಾರಿ(ಪಿಡಿಓ), ಕಾರ್ಯದರ್ಶಿ ಹಾಗು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.