ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ವಿಜಯಲಕ್ಷ್ಮೀ

ಭದ್ರಾವತಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ಅಧ್ಯಕ್ಷರಾಗಿ ನ್ಯೂಕಾಲೋನಿ ನಿವಾಸಿ ವಿಜಯಲಕ್ಷ್ಮೀ ಅವರನ್ನು ನೇಮಕಗೊಳಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ ಬಂಡಿ ಆದೇಶ ಹೊರಡಿಸಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ ವಿಜಯಲಕ್ಷ್ಮೀಯವರಿಗೆ ಆದೇಶ ಪತ್ರ ವಿತರಿಸಿದರು. 
    ಭದ್ರಾವತಿ : ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ಅಧ್ಯಕ್ಷರಾಗಿ ನ್ಯೂಕಾಲೋನಿ ನಿವಾಸಿ ವಿಜಯಲಕ್ಷ್ಮೀ ಅವರನ್ನು ನೇಮಕಗೊಳಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ ಬಂಡಿ ಆದೇಶ ಹೊರಡಿಸಿದ್ದಾರೆ. 
    ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ.ಸಂಗಮೇಶ್ವರ್‌ರವರ ನಿರ್ದೇಶನದ  ವಿಜಯಲಕ್ಷ್ಮೀ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ. ಹಲವಾರು ವರ್ಷಗಳಿಂದ ವಿಜಯಲಕ್ಷ್ಮೀಯವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದು, ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. 
   ಶಾಸಕ ಬಿ.ಕೆ.ಸಂಗಮೇಶ್ವರ್ ವಿಜಯಲಕ್ಷ್ಮೀಯವರನ್ನು ಶನಿವಾರ ತಮ್ಮ ಗೃಹ ಕಛೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು. ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಸದಸ್ಯರಾದ ವಿ. ಕದಿರೇಶ್,  ಬಿ.ಕೆ.ಮೋಹನ್, ಸರ್ವಮಂಗಳ ಭೈರಪ್ಪ, ಅನುಸುಧಾ ಮೋಹನ್ ಪಳನಿ, ಮಾಜಿ ಸದಸ್ಯ ಬದರಿನಾರಾಯಣ, ನರಸಿಂಹಮೂರ್ತಿ, ಕುಮಾರ್(ಮಾಸ್ಟರ್),  ಪಕ್ಷದ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ಮಾಜಿ ಅಧ್ಯಕ್ಷರಾದ ಮಂಜುಳ ರಾಮಚಂದ್ರ, ಸುಕನ್ಯ, ಮುಖಂಡ ಎನ್. ಮಂಜುನಾಥ್, ಮಾಜಿ ಸೈನಿಕ ಪಿ.ಕೆ ಹರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
   ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಳ್ಳಲು ಕಾರಣಕರ್ತರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರಿಗೆ ನೂತನ ಅಧ್ಯಕ್ಷೆ ವಿಜಯಲಕ್ಷ್ಮೀ ಕೃತಜ್ಞತೆ ಸಲ್ಲಿಸಿದ್ದಾರೆ.