ಫೆ.೧೪ರಂದು ವಿಇಎಸ್ ಸಾಂಸ್ಕೃತಿಕ ಸಂಭ್ರಮ



   ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ತಾಲೂಕು ಶಾಖೆ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ವಿಇಎಸ್ ಸಾಂಸ್ಕೃತಿಕ ಸಂಭ್ರಮ ಫೆ.೧೪ರಂದು ಸಂಜೆ ೫ ಗಂಟೆಗೆ ನಡೆಯಲಿದೆ. 
   ವಿಶ್ವೇಶ್ವರಾಯ ಕನ್ನಡ ಮತ್ತು ಆಂಗ್ಲ ಪೂರ್ವ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗು ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಮತ್ತು ವಿಶ್ವೇಶ್ವರಾಯ ಬಿ.ಇಡಿ ಕಾಲೇಜು ಸಹಯೋಗದೊಂದಿಗೆ ಸಾಂಸ್ಕೃತಿ ಸಂಭ್ರಮ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಅವರಣದಲ್ಲಿ ಹಮ್ಮಿಕೊಳ್ಳಲಾಗಿದೆ. 
   ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಪೂರ್‍ಯಾನಾಯ್ಕ, ವಿಧಾನ ಪರಿಷತ್ ಸದಸ್ಯೆ ಬಲ್ಕೀಷ್ ಬಾನು, ವಿದ್ಯಾಸಂಸ್ಥೆ ಮಹಾಪೋಷಕ ಸಿ.ಎಸ್ ಷಡಾಕ್ಷರಿ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಹೇಮಂತ್, ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಬಗರ್ ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಸ್. ಮಣಿಶೇಖರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. 
   ವಿದ್ಯಾಸಂಸ್ಥೆ ಅಧ್ಯಕ್ಷ ಬಿ. ಸಿದ್ದಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ವಿದ್ಯಾಸಂಸ್ಥೆ ಕಾರ್ಯದರ್ಶಿ ಎಸ್.ಕೆ ಮೋಹನ್, ಖಜಾಂಚಿ ಕೆ.ಆರ್ ಪ್ರಶಾಂತ್ ಮತ್ತು ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್ ಸಾಂಸ್ಕೃತಿಕ ಸಂಭ್ರಮ ಯಶಸ್ವಿಗೊಳಿಸಲು ಮನವಿ ಮಾಡಿದ್ದಾರೆ.