ತಹಸೀಲ್ದಾರ್ ವಿರುದ್ಧ ಷಡ್ಯಂತ್ರ ರೂಪಿಸಿ ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಆಡಳಿತ ಅಧಿಕಾರಿ ಸೇವೆಯಿಂದ ವಜಾಗೊಳಿಸಿ
ವಿವಿಧ ಸಂಘಟನೆಗಳ ಪ್ರಮುಖರಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ
ಭದ್ರಾವತಿ ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ವಿರುದ್ಧ ಷಡ್ಯಂತ್ರ ರೂಪಿಸಿ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಗ್ರಾಮ ಆಡಳಿತ ಅಧಿಕಾರಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸರ್ಕಾರಿ ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಬುಧವಾರ ವಿವಿಧ ಸಂಘಟನೆಗಳ ಪ್ರಮುಖರು ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ: ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ವಿರುದ್ಧ ಷಡ್ಯಂತ್ರ ರೂಪಿಸಿ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಗ್ರಾಮ ಆಡಳಿತ ಅಧಿಕಾರಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸರ್ಕಾರಿ ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಬುಧವಾರ ವಿವಿಧ ಸಂಘಟನೆಗಳ ಪ್ರಮುಖರು ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ತಾಲೂಕಿನ ಆಗರದಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಆರ್.ಜಿ ಅಭಿಷೇಕ್ ಮಂಗಳವಾರ ತಹಸೀಲ್ದಾರ್ ಪರುಸಪ್ಪ ಕುರುಬರ ಅವರ ವಿರುದ್ಧ ಇಲ್ಲಸಲ್ಲದ ಷಡ್ಯಂತ್ರ ರೂಪಿಸಿ ಕೆಲಸದ ಒತ್ತಡ ಹೇರಿ ಕರ್ತವ್ಯ ನಿರ್ವಹಿಸಲು ಪದೇ ಪದೇ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ಪತ್ರ ಬರೆದು ಸಿದ್ದಾಪುರ ಚಾನಲ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ತಕ್ಷಣ ತನಿಖೆ ಕೈಗೊಂಡು ಆರ್.ಜೆ ಅಭಿಷೇಕ್ ವಿರುದ್ಧ ಕ್ರಮ ಸೂಕ್ತ ಕಾನೂನು ಕ್ರಮ ಕೈಗೊಂಡು ಸೇವೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು. '
ಈ ನಡುವೆ ಗ್ರಾಮ ಅಧಿಕಾರಿಗಳ ಕರ್ತವ್ಯದ ಸಮಯದಲ್ಲಿ ಆರ್.ಜೆ ಅಭಿಷೇಕ್ ಆತ್ಮಹತ್ಯೆಗೆ ಪ್ರಯತ್ನಿಸಿರುವ ಕುರಿತು ಚರ್ಚಿಸಲು ಸಭೆ ಕರೆದಿರುವ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಯೋಗೀಶ್ ನಾಯ್ಕರವರ ವಿರುದ್ಧ ಸಹ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮುರುಗೇಶ್, ಕೆ. ಮಂಜುನಾಥ್, ಸೈಯದ್ ರಿಯಾಜ್, ಟಿ.ಎಚ್ ನಾಗೇಂದ್ರಪ್ಪ, ಎಸ್. ಲಿಂಗರಾಜ್, ಸಂತೋಷ್ ಕುಮಾರ್, ವೈ. ಶಶಿಕುಮಾರ್, ಜಿಂಕ್‌ಲೈನ್ ಮಣಿ, ಅಭಿಷೇಕ್ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.