ಫೆ.೧೯ರಂದು ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ
ಭದ್ರಾವತಿ : ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಫೆ.೧೯ರ ಗುರುವಾರ ಬೆಳಿಗ್ಗೆ ೧೦.೩೦ಕ್ಕೆ ಶ್ರೀ ಛತ್ರಪತಿ ಶಿವಾಜಿ ಜಯಂತಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯಾನಾಯ್ಕ ಉದ್ಘಾಟಿಸಲಿದ್ದಾರೆ.
ಸಂಸದ ಬಿ.ವೈ ರಾಘವೇಂದ್ರ ಸೇರಿದಂತೆ ಈ ವ್ಯಾಪ್ತಿಯ ವಿಧಾನ ಪರಿಷತ್ ಸದಸ್ಯರು, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಬದರಿನಾರಾಯಣ, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಮರಾಠ ಸಮಾಜದ ಅಧ್ಯಕ್ಷ ಎಚ್.ಎಲ್ ರಂಗನಾಥರಾವ್ ಚೌವ್ಹಾಣ್, ತಹಸೀಲ್ದಾರ್ ಪರುಸಪ್ಪ ಕುರುಬರ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.