ಸೈಲ್-ವಿಐಎಸ್‌ಎಲ್ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ
ಅರಬಿಳಚಿ ಕ್ಯಾಂಪ್‌ನಲ್ಲಿ ಉಚಿತ ವೈದ್ಯಕೀಯ ಆರೋಗ್ಯ ಶಿಬಿರ
ಶಿವಮೊಗ್ಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆ, ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ, ಮತ್ತು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ಹಾಗು ಇಸ್ಪಾತ್ ಮಹಿಳಾ ಸಮಾಜದ ಸಹಯೋಗದೊಂದಿಗೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್‌ನಲ್ಲಿ ಸಮಗ್ರ ಉಚಿತ ವೈದ್ಯಕೀಯ ಆರೋಗ್ಯ ಶಿಬಿರ ಶನಿವಾರ ಆಯೋಜಿಸಲಾಗಿತ್ತು.
ಭದ್ರಾವತಿ: ಶಿವಮೊಗ್ಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆ, ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ, ಮತ್ತು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ಹಾಗು ಇಸ್ಪಾತ್ ಮಹಿಳಾ ಸಮಾಜದ ಸಹಯೋಗದೊಂದಿಗೆ ತಾಲೂಕಿನ ಅರಬಿಳಚಿ ಕ್ಯಾಂಪ್‌ನಲ್ಲಿ ಸಮಗ್ರ ಉಚಿತ ವೈದ್ಯಕೀಯ ಆರೋಗ್ಯ ಶಿಬಿರ ಶನಿವಾರ ಆಯೋಜಿಸಲಾಗಿತ್ತು.
ಹೃದಯಶಾಸ್ತ್ರ, ಮೂಳೆ ಚಿಕಿತ್ಸೆ, ಸಾಮಾನ್ಯ ತಪಾಸಣೆ, ನೇತ್ರವಿಜ್ಞಾನ, ದಂತ ವೈದ್ಯಶಾಸ್ತ್ರ ಮತ್ತು ಸ್ತ್ರೀರೋಗ ಶಾಸ್ತ್ರದಂತಹ ಕ್ಷೇತ್ರಗಳಲ್ಲಿ ಅನುಭವಿ ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ಸಮಾಲೋಚನೆ ಮತ್ತು ರೋಗನಿರ್ಣಯ ಸೇವೆಗಳನ್ನು ನೀಡಲಾಯಿತು. ಅಲ್ಲದೆ ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ಕಣ್ಣಿನ ಪರೀಕ್ಷೆ, ದಂತ ತಪಾಸಣೆ, ಎಲೆಕ್ಟ್ರೋಕಾರ್ಡಿಯೋಗ್ರಾಮ್(ಇಸಿಜಿ) ಮತ್ತು ಸ್ತ್ರೀ ಸಂಬಂಧಿತ ರೋಗಗಳ ತಪಾಸಣೆಗಳನ್ನು ನಡೆಸಲಾಯಿತು.
ಇಸ್ಪಾತ್ ಮಹಿಳಾ ಸಮಾಜದ ಅಧ್ಯಕ್ಷೆ ನಿಶಾ ಅನೂಪ್ ಕುಮಾರ್ ಶಿಬಿರ ಉದ್ಘಾಟಿಸಿದರು. ಕಾರ್ಖಾನೆಯ ಪ್ರಭಾರಿ ಕಾರ್ಯಪಾಲಕ ನಿರ್ದೆಶಕ ಬಿ. ವಿಶ್ವನಾಥ, ಪ್ರಭಾರಿ ಮಹಾ ಪ್ರಬಂಧಕ(ಸ್ಥಾವರ) ಟಿ. ರವಿಚಂದ್ರನ್, ಡಾ. ಕೆ.ಎಸ್ ಸುಜೀತ್‌ಕುಮಾರ್, ಡಾ. ಟಿ.ಎನ್ ಸುಷ್ಮಾ, ಡಾ. ಎಸ್.ಎನ್ ಸುರೇಶ್, ಇಸ್ಪಾತ್ ಮಹಿಳಾ ಸಮಾಜದ ಉಪಾಧ್ಯಕ್ಷರಾದ ಪಂಕಜ ವಿಶ್ವನಾಥ್, ಸುಗಂಧೀ ರವಿಚಂದ್ರನ್, ಕಾರ್ಯದರ್ಶಿ ಈಶ್ವರೀನಾಥನ್, ಜಂಟಿ ಕಾರ್ಯದರ್ಶಿ ಶ್ರವಂತಿ ರೆಡ್ಡಿ, ಎಮ್.ಎಲ್. ಯೋಗೀಶ್, ಅರಬಿಳಚಿ ಕ್ಯಾಂಪ್ ಶಿವುಮೇಸ್ತ್ರಿ, ಮುರುಗೇಶ, ರಾಮಲಿಂಗಮ್, ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಡಾ. ಪ್ರಶಾಂತಿ, ಡಾ. ಸಹನ ಪೂಜಾರಿ, ತಹೀನಾ, ಶಿನ್ಸಿ ಮತ್ತು ಗಣೇಶ್ ಹಾಗು ಶಂಕರ ಕಣ್ಣಿನ ಆಸ್ಪತ್ರೆಯ ಡಾ. ಲಕ್ಷಿತ, ಪ್ರದೀಪ್ ಮತ್ತು ತಂಡದವರು ಉಪಸ್ಥಿತರಿದ್ದರು. ೧೯೬ ಗ್ರಾಮಸ್ಥರು ಶಿಬಿರದ ಸದುಪಯೋಗಪಡಿಸಿಕೊಂಡರು. ವಿಐಎಸ್‌ಎಲ್‌ವತಿಯಿಂದ ಉಚಿತ ಔಷಧಿಗಳನ್ನು ವಿತರಿಸಲಾಯಿತು.