ಭೂ ದಾಖಲೆಗಳನ್ನು ನೀಡುವ ಕಾರ್ಯದಲ್ಲಿ ವಿಳಂಬ : ಸಚಿವರಿಗೆ ಮನವಿ
ಭೂ ದಾಖಲೆಗಳನ್ನು ನೀಡುವ ಕಾರ್ಯದಲ್ಲಿ ವಿಳಂಬವಾಗುತ್ತಿದ್ದು, ಕಂದಾಯ ಇಲಾಖೆ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕೆಂದು ಭದ್ರಾವತಿ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಭದ್ರಾವತಿ: ಭೂ ದಾಖಲೆಗಳನ್ನು ನೀಡುವ ಕಾರ್ಯದಲ್ಲಿ ವಿಳಂಬವಾಗುತ್ತಿದ್ದು, ಇದರಿಂದಾಗಿ ರೈತರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿದೆ. ಕಂದಾಯ ಇಲಾಖೆ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕೆಂದು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ಪಿ.ಎಲ್.ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸರ್ಕಾರದ ಅಧಿಕೃತ ಭೂಮಿ ತಂತ್ರಾಂಶದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದ್ದು, ಇದರಿಂದಾಗಿ ರೈತರು ಖಾತೆ, ಪಹಣಿ ಸೇರಿದಂತೆ ಭೂ ದಾಖಲೆಗಳನ್ನು ಪಡೆಯಲು ತಾಲೂಕು ಕಚೇರಿ ಅಲೆದಾಡುವಂತಾಗಿದೆ. ರೈತರು ಸಾಲ ಸೌಲಭ್ಯ, ಬೆಳೆವಿಮೆ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಮನವಿ ಮಾಡಿದ್ದಾರೆ.
ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನಿರ್ದೇಶಕ ದಶರಥಗಿರಿ, ಮೆಸ್ಕಾಂ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.