ವಿಶೇಷ ಚೇತನ ಮಕ್ಕಳಿಗೆ ವಿಶಿಷ್ಟ ಶಕ್ತಿ : ಹಿರಿಯ ಪತ್ರಕರ್ತ ಕಣ್ಣಪ್ಪ

ಭದ್ರಾವತಿಯಲ್ಲಿ ಅಖಿಲ ಕರ್ನಾಟಕ ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಒಕ್ಕೂಟ, ಸರ್.ಎಂ.ವಿ ದ್ವಿಚಕ್ರ ವಾಹನ ದುರಸ್ತಿದಾರರ ಸಂಘ ಹಾಗು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಕ್ಷೇತ್ರ ಸಮನ್ವಯ ಸಂಪನ್ಮೂಲ ಶಿಕ್ಷಕರು ಹಾಗು ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶೇಷ ಚೇತನ ಮಕ್ಕಳಿಗೆ ಸ್ಕೂಲ್ ಬ್ಯಾಗ್,  ಬ್ಲಾಂಕೆಟ್ ವಿತರಣೆ ಹಾಗು ಕಾರ್ಮಿಕರಿಗೆ ಕ್ಯಾಲೆಂಡರ್ ವಿತರಣೆ ಕಾರ್ಯಕ್ರಮ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ, ಹಿರಿಯ ಪತ್ರಕರ್ತ ಕಣ್ಣಪ್ಪ ಸೇರಿದಂತೆ  ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ : ವಿಶೇಷ ಚೇತನ ಮಕ್ಕಳಿಗೆ ಭಗವಂತ ವಿಶಿಷ್ಟ ಸಾಧನೆ ಮಾಡುವ ಶಕ್ತಿ ನೀಡಿರುತ್ತಾನೆ. ಸಮಾಜದ ಪ್ರತಿಯೊಬ್ಬರು ವಿಶೇಷ ಚೇತನ ಮಕ್ಕಳ ಬೆಳವಣಿಗೆಗೆ ಕೈಜೋಡಿಸಬೇಕೆಂದು ಹಳೇನಗರ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ, ಹಿರಿಯ ಪತ್ರಕರ್ತ ಕಣ್ಣಪ್ಪ ಮನವಿ ಮಾಡಿದರು. 
    ಅವರು ಪತ್ರಿಕಾಭವನದಲ್ಲಿ ಮಂಗಳವಾರ ಅಖಿಲ ಕರ್ನಾಟಕ ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಒಕ್ಕೂಟ, ಸರ್.ಎಂ.ವಿ ದ್ವಿಚಕ್ರ ವಾಹನ ದುರಸ್ತಿದಾರರ ಸಂಘ ಹಾಗು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಕ್ಷೇತ್ರ ಸಮನ್ವಯ ಸಂಪನ್ಮೂಲ ಶಿಕ್ಷಕರು ಹಾಗು ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶೇಷ ಚೇತನ ಮಕ್ಕಳಿಗೆ ಸ್ಕೂಲ್ ಬ್ಯಾಗ್,  ಬ್ಲಾಂಕೆಟ್ ವಿತರಣೆ ಹಾಗು ಕಾರ್ಮಿಕರಿಗೆ ಕ್ಯಾಲೆಂಡರ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
    ವಿಶೇಷ ಚೇತನ ಮಕ್ಕಳನ್ನು ಆರೈಕೆ ಮಾಡುವುದು ಬಹಳ ಸವಾಲಿನ ಕೆಲಸವಾಗಿದೆ. ಮನೆಗಳಲ್ಲಿ ಪೋಷಕರು ಅನುಭವಿಸುವ ನೋವುಗಳನ್ನು ಇತರರೊಂದಿಗೆ ಹಂಚಿಕೊಳ್ಳುವಾಗ ಮನಸ್ಸಿಗೆ ಬೇಸರವಾಗುತ್ತದೆ. ಆದರೆ ವಿಶೇಷ ಚೇತನ ಮಕ್ಕಳಿಗೆ ವಿಶೇಷವಾದ ಶಕ್ತಿ ಇರುತ್ತದೆ. ಪೋಷಕರು ಅದನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಅಲ್ಲದೆ ಸಮಾಜದ ಸಂಘ-ಸಂಸ್ಥೆಗಳು, ದಾನಿಗಳು, ಗಣ್ಯರು ಇತಂತಹ ಮಕ್ಕಳ ನೆರವಿಗೆ ಧಾವಿಸಬೇಕೆಂದರು. 
    ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ ಮಾತನಾಡಿ, ಪ್ರಪಂಚದಲ್ಲಿ ಬಹಳಷ್ಟು ವಿಶೇಷ ಚೇತನ ಮಕ್ಕಳು ತಮ್ಮದೇ ಆದ ಸಾಧನೆಗಳ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಂಡಿದ್ದಾರೆ. ವಿಶೇಷ ಚೇತನ ಮಕ್ಕಳನ್ನು ಮನೆಗಳಲ್ಲಿ ಮಮತೆಯಿಂದ, ಪ್ರೀತಿಯಿಂದ ಹಾಗು ಗೌರವದಿಂದ ಕಾಣಬೇಕು. ಅವರ ಉಜ್ವಲ ಭವಿಷ್ಯಕ್ಕಾಗಿ ಸಮಾಜದ ಪ್ರತಿಯೊಬ್ಬರು ಕೈಜೋಡಸಬೇಕಾಗಿದೆ ಎಂದರು. 


ಭದ್ರಾವತಿಯಲ್ಲಿ ಅಖಿಲ ಕರ್ನಾಟಕ ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಒಕ್ಕೂಟ, ಸರ್.ಎಂ.ವಿ ದ್ವಿಚಕ್ರ ವಾಹನ ದುರಸ್ತಿದಾರರ ಸಂಘ ಹಾಗು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಕ್ಷೇತ್ರ ಸಮನ್ವಯ ಸಂಪನ್ಮೂಲ ಶಿಕ್ಷಕರು ಹಾಗು ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ವಿಶೇಷ ಚೇತನ ಮಕ್ಕಳಿಗೆ ಸ್ಕೂಲ್ ಬ್ಯಾಗ್,  ಬ್ಲಾಂಕೆಟ್ ವಿತರಣೆ ಹಾಗು ಕಾರ್ಮಿಕರಿಗೆ ಕ್ಯಾಲೆಂಡರ್ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಒಕ್ಕೂಟದ ತಾಲೂಕು ಅಧ್ಯಕ್ಷ ತ್ಯಾಗೂ(ಪರಮೇಶ್) ಅಧ್ಯಕ್ಷತೆವಹಿಸಿದ್ದರು. ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ. ಸುಂದರ್ ಬಾಬು ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. 
    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾನಾಯ್ಕ ಗೊಂದಿ, ಗಾಂಧಿನಗರದ ವೇಳಾಂಗಣಿ ಆರೋಗ್ಯಮಾತೆ ದೇವಾಲಯದ ಧರ್ಮಗರು ಪಾದರ್ ಸ್ಟೀವನ್ ಡೇಸಾ, ನಗರಸಭೆ ಸದಸ್ಯ ಬಸವರಾಜ ಬಿ ಆನೇಕೊಪ್ಪ, ಕಾರ್ಮಿಕ ಮುಖಂಡ ಎಚ್. ರವಿಕುಮಾರ್, ಕಾರ್ಮಿಕ ನಿರೀಕ್ಷಕರಾದ ರಕ್ಷಿತ್, ಸುಪ್ರಿಯಾ, ಅಖಿಲ ಕರ್ನಾಟಕ ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ. ಸಂಜಯ್ ಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಕವಿತಾ, ಮಹಾದೇವಾಚಾರ್, ಬಾಬಣ್ಣ, ರಾಜೇಶ್ವರಿ, ಪುಷ್ಪ, ಪ್ರಭುಮೇಸ್ತ್ರಿ, ಸುಂದರ್, ಜಗದೀಶ್, ಕೃಷ್ಣ ರಾಯ್ಕರ್, ಚಂದ್ರ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಜಯ್ ಸಾರಥಿ ಕಾರ್ಯಕ್ರಮ ನಿರೂಪಿಸಿದರು.