ಗಾಂಜಾ ಖರೀದಿಸಿ ಮನೆಯಲ್ಲಿಟ್ಟುಕೊಂಡು ಮಾರಾಟ : ಪ್ರಕರಣ ದಾಖಲು

    ಭದ್ರಾವತಿ :  ಗಾಂಜಾ ಖರೀದಿಸಿ ಮನೆಯಲ್ಲಿಟ್ಟುಕೊಂಡು ಮಾರಾಟ ಮಾಡುವ ಮೂಲಕ ಅಕ್ರಮವಾಗಿ ಹಣ ಸಂಪಾದನೆಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನ ವಿರುದ್ಧ ಪೇಪರ್‌ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ. 
    ಠಾಣೆಯ ಉಪ ನಿರೀಕ್ಷಕ ಕೃಷ್ಣಕುಮಾರ್ ಬಿ. ಮಾನೆ  ಫೆ.೬ರಂದು ಗಸ್ತು ಕರ್ತವ್ಯದಲ್ಲಿದ್ದಾಗ ಬಾರಂದೂರು ಗ್ರಾಮದ ತಮಿಳು ಬೀದಿ ವ್ಯಕ್ತಿಯೊಬ್ಬರು ಹಳೇನಗರ ಭೂತನಗುಡಿ ತಮ್ಮ ಸಂಬಂಧಿಕರೊಬ್ಬರಿಂದ ಗಾಂಜಾ ಖರೀದಿಸಿ ಮನೆಯಲ್ಲಿಟ್ಟುಕೊಂಡು ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಚಿಕ್ಕ ಚಿಕ್ಕ ಪ್ಯಾಕೇಟ್ ಮಾಡಿ ಮಾರಾಟ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಈ ಸಂಬಂಧ ಗಾಂಜಾ ಮಾರಾಟದಲ್ಲಿ ತೊಡಗಿರುವ ಹಾಗು ಅಕ್ರಮವಾಗಿ ಗಾಂಜಾ ಹೊಂದಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ.