ಮಾ. 31 ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಭದ್ರಾವತಿ: ಪ್ರತಿವರ್ಷದಂತೆ ಈ ಬಾರಿ ಸಹ ಹಳೇ ನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಮಾ.31ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಯೋಜಿಸಲಾಗಿದೆ.
ಸಂಜೆ 5.30ಕ್ಕೆ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಉದ್ಘಾಟಿಸುವರು. ಭಾರ ಎತ್ತುವ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಚಿನ್ನದ ಪದಕ ಪ್ರಶಸ್ತಿ ವಿಜೇತೆ ದೇವಿಕ ಅವರಿಗೆ ಸನ್ಮಾನ ನಡೆಯಲಿದೆ. ಮಹಿಳಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ನ್ಯಾಯವಾದಿ ರೂಪರಾವ್, ಸಮಾಜದ ಹಿರಿಯ ಸದಸ್ಯೆ ನಗರತ್ನ ಮಲ್ಲಿಕಾರ್ಜುನ, ಗೌರವ ಅಧ್ಯಕ್ಷೆ ಗೌರಮ್ಮ ಶಂಕರಯ್ಯ, ಪ್ರಧಾನ ಕಾರ್ಯದರ್ಶಿ ಶೋಭಾ ಗಂಗರಾಜ್ ಮತ್ತು ಖಜಾಂಚಿ ಜಯಂತಿ ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿರುವರು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಕೋರಿದ್ದಾರೆ.