ಮಾ.೧೧ರಂದು `ಡಿಎಸ್‌ಎಸ್ ಬೆಂಗಳೂರು ಚಲೋ' : ಪೋಸ್ಟರ್ ಬಿಡುಗಡೆ
ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮಾ.೧೧ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆ ಹಿನ್ನಲೆಯಲ್ಲಿ ಗುರುವಾರ ಭದ್ರಾವತಿ ನಗರದ ತಾಲೂಕು ಕಛೇರಿ ಆವರಣದಲ್ಲಿ `ಡಿಎಸ್‌ಎಸ್ ಬೆಂಗಳೂರು ಚಲೋ' ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಭದ್ರಾವತಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮಾ.೧೧ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆ ಹಿನ್ನಲೆಯಲ್ಲಿ ಗುರುವಾರ ನಗರದ ತಾಲೂಕು ಕಛೇರಿ ಆವರಣದಲ್ಲಿ `ಡಿಎಸ್‌ಎಸ್ ಬೆಂಗಳೂರು ಚಲೋ' ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾಗಿರುವ ಅನುದಾನ ಇತರೆ ಉದ್ದೇಶಗಳಿಗೆ ಬಳಸಬಾರದು. ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವ ೨೫,೦೦೦ ಕೋ. ರು. ಹಿಂಪಡೆಯಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಶೇ. ೨೪.೧ ರಷ್ಟು ಅನುದಾನ ಮೀಸಲಿರಿಸಬೇಕೆಂದು ಆಗ್ರಹಿಸಲಾಯಿತು.
ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಒಳಮಿಸಲಾತಿ ಅಳವಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಲಾಯಿತು.
ಡಿಎಸ್‌ಎಸ್ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶಿವಬಸಪ್ಪ , ಜಿಲ್ಲಾ ಸಂಘಟನಾ ಸಂಚಾಲಕ ಎಡವಾಲ ಹನುಮಂತಪ್ಪ , ತಾಲೂಕು ಸಂಚಾಲಕ ಕಾಚಗೊಂಡನಹಳ್ಳಿ ನಾಗರಾಜ್, ಮುಖಂಡರಾದ ಎ. ಅರ್ಜುನ್, ಬೊಮ್ಮೇನಹಳ್ಳಿ ಶ್ರೀನಿವಾಸ್, ಸಿರಿಯೂರು ಶಿವಣ್ಣ ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು.