ಅಭ್ಯುದಯ ಸೇವಾ ಟ್ರಸ್ಟ್ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿ ಮುಂಚೂಣಿಗೆ ಬರಲಿ : ಬಿ.ವೈ ರಾಘವೇಂದ್ರ

ಭದ್ರಾವತಿ ತಾಲೂಕಿನ ಗೊಂದಿ ಆಶ್ರಮದಲ್ಲಿ  ವಿವಿಧ ಮಠ-ಮಂದಿರಗಳ ಪೀಠಾಧ್ಯಕ್ಷರ ಸಮ್ಮುಖದಲ್ಲಿ ಸೋಮವಾರ ಸಂಸದ ಬಿ.ವೈ ರಾಘವೇಂದ್ರ, ಕಜಂಪಾಡಿ ಸುಬ್ರಮಣ್ಯ ಭಟ್ ಸೇರಿದಂತೆ ಇನ್ನಿತರರು ಅಭ್ಯುದಯ ಸೇವಾ ಟ್ರಸ್ಟ್ ಲೋಕಾರ್ಪಣೆಗೊಳಿಸಿದರು.  
    ಭದ್ರಾವತಿ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ `ಅಭ್ಯುದಯ ಸೇವಾ ಟ್ರಸ್ಟ್' ಶಿಕ್ಷಣ, ಸಂಸ್ಕೃತಿ ಮತ್ತು ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುವಂತಾಗಲಿ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು. 
    ಅವರು ಸೋಮವಾರ ತಾಲೂಕಿನ ಗೊಂದಿ ಆಶ್ರಮದಲ್ಲಿ  ವಿವಿಧ ಮಠ-ಮಂದಿರಗಳ ಪೀಠಾಧ್ಯಕ್ಷರ ಸಮ್ಮುಖದಲ್ಲಿ ಅಭ್ಯುದಯ ಸೇವಾ ಟ್ರಸ್ಟ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಯುವಂತಾಗಲಿ. ಈ ಮೂಲಕ ಟ್ರಸ್ಟ್ ಸ್ಥಾಪನೆ ಸಾರ್ಥಕತೆಯಾಗಲಿ ಎಂದು ಆಶಿಸಿದರು. 
    ಚಿತ್ರದುರ್ಗ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿ ಮತ್ತು ಶ್ರೀ ಸರ್ದಾರ್ ಸೇವಾಲಾಲ್ ಮಠದ ಪೀಠಾಧ್ಯಕ್ಷರಾದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಮತ್ತು ತಾಯಿ ಮುಕ್ತಾನಂದಮಯಿ ಮಾತಾಜಿ ಹಾಗು ಶ್ರೀ ಕ್ಷೇತ್ರ ಆದಿ ಚುಂಚನಗಿರಿ ಸಂಸ್ಥಾನ ಶಿವಮೊಗ್ಗ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. 
    ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯ ಕಜಂಪಾಡಿ ಸುಬ್ರಮಣ್ಯ ಭಟ್ ಮತ್ತು ಟ್ರಸ್ಟ್ ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಅಭ್ಯುದಯ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಕೆ ಶ್ರೀನಾಥ್ ಅಧ್ಯಕ್ಷತೆ ವಹಿಸಿದ್ದರು.