ಸುದರ್ಶನ ಶಾಸ್ತ್ರಿ ನಿಧನ
ಸುದರ್ಶನ ಶಾಸ್ತ್ರಿ
ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ, ಸಿದ್ದಾರೂಢ ನಗರದ ಧರ್ಮಶ್ರೀ ಸಭಾಭವನ ಸಮೀಪದ ನಿವಾಸಿ ಸುದರ್ಶನ ಶಾಸ್ತ್ರಿ(೭೬) ನಿಧನ ಹೊಂದಿದರು.
ಪತ್ನಿ, ಪುತ್ರ ಹಾಗು ಪುತ್ರಿ ಇದ್ದಾರೆ. ವಿಐಎಸ್‌ಎಲ್ ಕಾರ್ಖಾನೆ ಪ್ರೊಸಸ್ ಕಂಟ್ರೋಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರ ಅಂತ್ಯಕ್ರಿಯೆ ಸೋಮವಾರ ನೆರವೇರಿತು. ಇವರ ನಿಧನಕ್ಕೆ ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ನೌಕರರು, ಕಾರ್ಮಿಕ ಮುಖಂಡರು ಸೇರಿದಂತೆ ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ.