ವೃತ್ತಿಯ ಜೊತೆಗೆ ಸೇವಾ ಮನೋಭಾವನೆ ಮುಖ್ಯ : ಡಾ. ನರೇಂದ್ರ ಭಟ್
ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಶಂಕರ ಕಣ್ಣಿನ ಆಸ್ಪತ್ರೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ ಪತ್ರಕರ್ತರು ಹಾಗು ಅವರ ಕುಟುಂಬ ವರ್ಗದವರಿಗೆ ಬುಧವಾರ ಆಯೋಜಿಸಲಾಗಿದ್ದ ಉಚಿತ ನೇತ್ರಾ ತಪಾಸಣೆ ಶಿಬಿರ ನಗರದ ಹಿರಿಯ ವೈದ್ಯ ಡಾ. ನರೇಂದ್ರ ಭಟ್ ಉದ್ಘಾಟಿಸಿದರು.
ಭದ್ರಾವತಿ: ಪತ್ರಕರ್ತರ ಸೇವೆ ಸಮಾಜಕ್ಕೆ ಅಗತ್ಯವಾಗಿದ್ದು, ಅವರು ಸಲ್ಲಿಸುತ್ತಿರುವ ಸೇವೆ ಶಾಶ್ವತವಾಗಿ ಉಳಿಯಲಿದೆ. ಅವರ ಆರೋಗ್ಯ ಕಾಳಜಿಗೆ ನಾವೆಲ್ಲರೂ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ನೇತ್ರಾ ತಪಾಸಣೆ ಶಿಬಿರ ಹೆಚ್ಚು ಸಹಕಾರಿಯಾಗಿದೆ ಎಂದರು ನಗರದ ಹಿರಿಯ ವೈದ್ಯ ಡಾ. ನರೇಂದ್ರ ಭಟ್ ಹೇಳಿದರು.
ಅವರು ಬುಧವಾರ ಹಳೇನಗರದ ಪತ್ರಿಕಾಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಶಂಕರ ಕಣ್ಣಿನ ಆಸ್ಪತ್ರೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ ಪತ್ರಕರ್ತರು ಹಾಗು ಅವರ ಕುಟುಂಬ ವರ್ಗದವರಿಗೆ ಆಯೋಜಿಸಲಾಗಿದ್ದ ಉಚಿತ ನೇತ್ರಾ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಪತ್ರಕರ್ತರು ಸಹ ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವವರಾಗಿದ್ದು, ಸದಾ ವೃತ್ತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ವೃತ್ತಿಯ ಜೊತೆಗೆ ಸೇವಾ ಮನೋಭಾವನೆ ಬೆಳೆಸಿಕೊಂಡಾಗ ಮಾತ್ರ ನಮ್ಮ ಬದುಕು ಸಾರ್ಥಕಗೊಳ್ಳುತ್ತದೆ. ಉಚಿತ ನೇತ್ರಾ ತಪಾಸಣೆ ಶಿಬಿರದ ಸದುಪಯೋಗಪಡೆದುಕೊಳ್ಳುವಂತೆ ಕರೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಅಧ್ಯಕ್ಷತೆ ವಹಿಸಿದ್ದರು. ಶಂಕರ ಕಣ್ಣಿನ ಆಸ್ಪತ್ರೆ, ಶಿವಮೊಗ್ಗ ತಜ್ಞ ವೈದ್ಯರಾದ ಡಾ. ಲಕ್ಷಿತಾ ಮತ್ತು ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ ಉಪಸ್ಥಿತರಿದ್ದರು. ತಾಲೂಕು ಘಟಕದ ಉಪಾಧ್ಯಕ್ಷ ಜಿ. ಸುಭಾಷ್‌ರಾವ್ ನಿರೂಪಿಸಿ, ಕಾರ್ಯದರ್ಶಿ ಅನಂತಕುಮಾರ್ ವಂದಿಸಿದರು.
ಶಂಕರ ಕಣ್ಣಿನ ಆಸ್ಪತ್ರೆ, ಶಿವಮೊಗ್ಗ, ನೇತ್ರಾ ತಜ್ಞೆ ಡಾ. ಲಕ್ಷಿತಾ ನೇತೃತ್ವದಲ್ಲಿ ಡಾ ಆರ್. ರಂಜಿತಾ, ಡಿ. ವೇದಾವತಿ, ಮನೀಶಾ, ವಿಂಧ್ಯಾ ಮತ್ತು ಅಕ್ಷಿತಾ ಅವರನ್ನೊಳಗೊಂಡ ತಂಡ ಯಶಸ್ವಿಯಾಗಿ ತಪಾಸಣೆ ನಡೆಸಿತು.

