ಕೇರಳ ಸಮಾಜಂ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಭದ್ರಾವತಿ ನಗರದ ನ್ಯೂಟೌನ್ ಶ್ರೀ ಅಯ್ಯಪ್ಪ ಸೇವಾ ಸಮಿತಿ ಸಭಾಭವನದಲ್ಲಿ ಕೇರಳ ಸಮಾಜಂ ಮಹಿಳಾ ಘಟಕದಿಂದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕೇರಳ ಸಮಾಜದ ಅಧ್ಯಕ್ಷ ಗಂಗಾಧರನ್ ಉದ್ಘಾಟಿಸಿದರು.
    ಭದ್ರಾವತಿ : ನಗರದ ಕೇರಳ ಸಮಾಜಂ ಮಹಿಳಾ ಘಟಕದಿಂದ ನ್ಯೂಟೌನ್ ಶ್ರೀ ಅಯ್ಯಪ್ಪ ಸೇವಾ ಸಮಿತಿ ಸಭಾಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಜರುಗಿತು.
    ಸಮಾಜದ ಅಧ್ಯಕ್ಷೆ ಶೋಭಾ ಬಾಲಚಂದ್ರನ್ ಅಧ್ಯಕ್ಷತೆ ವಹಿಸಿದ್ದರು. ಸುರಭಿ ವ್ಯಸನ ಮುಕ್ತ ಕೇಂದ್ರದ ನಿರ್ದೇಶಕಿ ವಿ.ವಿ.ಲತಾ, ಹಿರಿಯ ಪೌರ ಕಾರ್ಮಿಕರಾದ ಸುಶೀಲಮ್ಮ, ಸಮಾಜದ ಪ್ರಧಾನ ಕಾರ್ಯದರ್ಶಿ ವಿಜಯಲಕ್ಷ್ಮಿ ಪಿ.ಸಿ.ಕುಮಾರ್, ಪದಾಧಿಕಾರಿಗಳಾದ ವಾಸಂತಿ, ಕಲ್ಯಾಣಿ ಶಶಿಧರನ್, ಯಶೋಧ, ಎಸ್.ವಿಜಯಲಕ್ಷ್ಮಿ, ಸೀತಾಲಕ್ಷ್ಮಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 
    ಕೇರಳ ಸಮಾಜಂ ಅಧ್ಯಕ್ಷ ಗಂಗಾಧರನ್ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.