ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಘಟನಾ ಸ್ಥಳಕ್ಕೆ ಎಎಸ್‌ಪಿ ಭೇಟಿ : ಪರಿಶೀಲನೆ
ಕಳೆದ ೪ ದಿನಗಳ ಹಿಂದೆ ಭದ್ರಾವತಿ ನಗರದ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬೈಪಾಸ್ ರಸ್ತೆ ಬಿಳಿಕಿ ತಿರುವಿನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಮೇಲೆ ನಡೆದಿದ್ದು, ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷ ಎ.ಜಿ ಕಾರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ಉಪವಿಭಾಗದ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು.
ಭದ್ರಾವತಿ: ಕಳೆದ ೪ ದಿನಗಳ ಹಿಂದೆ ನಗರದ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬೈಪಾಸ್ ರಸ್ತೆ ಬಿಳಿಕಿ ತಿರುವಿನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಮೇಲೆ ನಡೆದಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಅವರಿಗೆ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷ ಎ.ಜಿ ಕಾರಿಯಪ್ಪ ಸೂಚಿಸಿದ್ದಾರೆ.
ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡಿಪಡಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಎ.ಜಿ ಕಾರಿಯಪ್ಪರವರು ಘಟನೆ ಸಂಬಂಧ ದಾಖಲಾಗಿರುವ ದೂರನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ತಕ್ಷಣ ಪತ್ತೆ ಮಾಡುವ ಕುರಿತಂತೆ ನ್ಯೂಟೌನ್ ಪೊಲೀಸ್ ಠಾಣಾ ಉಪ ನಿರೀಕ್ಷಕರಿಗೆ ಮಾರ್ಗದರ್ಶನ ನೀಡಿದರು.
ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳುಹಿಸದಂತೆ ಎಚ್ಚರವಹಿಸುವಂತೆ ಹಾಗು ನಗರದ ಅತಿಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.