ದೌರ್ಜನ್ಯದ ವಿರುದ್ಧ ಧೈರ್ಯವಾಗಿ ಹೋರಾಡುವ ಜೊತೆಗೆ ಮೋಸ, ವಂಚನೆಗಳಿಂದ ಜಾಗೃತರಾಗಿರಿ : ಕವಿತಾ
ಬಿಜೆಪಿ ಮಹಿಳಾ ಮೋರ್ಚಾದಿಂದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಭದ್ರಾವತಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಹಿಳಾ ಮೋರ್ಚಾ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಗರದ ದೇವರಾಜ ಅರಸು ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭದ್ರಾವತಿ: ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಹಿಳಾ ಮೋರ್ಚಾ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಗರದ ದೇವರಾಜ ಅರಸು ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪೇಪರ್‌ಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಕವಿತಾರವರು, ವಿದ್ಯಾರ್ಥಿನಿಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಶುಭಾಶಯ ತಿಳಿಸಿ ಜೀವನದ ನಿರ್ಣಾಯಕ ಘಟ್ಟದಲ್ಲಿರುವ ತಾವೆಲ್ಲರೂ ಶ್ರದ್ದೆಯಿಂದ ಓದಿ ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಧೈರ್ಯವಾಗಿ ಹೋರಾಡುವ ಜೊತೆಗೆ ಮೋಸ, ವಂಚನೆಗಳಿಂದ ಜಾಗೃತರಾಗಿರಬೇಕು. ದೈಹಿಕವಾಗಿ, ಮಾನಸಿಕವಾಗಿ ಕಿರುಕುಳ ಸಮಸ್ಯೆಗಳು ಇದ್ದಲ್ಲಿ ೧೧೨ ಸಂಖ್ಯೆಗೆ ಕರೆ ಮಾಡಿ, ಸೈಬರ್ ವಂಚನೆಗೆ ೧೯೩೦ ಸಂಖ್ಯೆಗೆ ಕರೆ ಮಾಡಿ ಅಥವಾ ಖುದ್ದಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿ. ಕಾನೂನು ಸದಾ ನಿಮ್ಮ ಜೊತೆಯಲ್ಲಿದೆ ಎಂಬುದಾಗಿ ಭರವಸೆ ನೀಡಿದರು.
ಬಿಜೆಪಿ ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ಅನ್ನಪೂರ್ಣ ಹಾಗೂ ಗ್ರಾಮಾಂತರ ಅಧ್ಯಕ್ಷೆ ಶಕುಂತಲಾ ಪ್ರದೀಪ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಾಲಕಿಯರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಚಂದ್ರಕಲಾ, ಮಂಡಲ ಕಾರ್ಯದರ್ಶಿ ಕವಿತ ರಾವ್ ಹಾಗೂ ಎಸ್.ಟಿ ಮೋರ್ಚಾ ಅಧ್ಯಕ್ಷೆ ನಾಗಮಣಿ ಮತ್ತು ಪ್ರಮುಖರಾದ ಶಶಿಕಲಾ, ಪದ್ಮಪ್ರಿಯಾ, ರುಕ್ಮಿಣಿ, ಜಯಶೀಲಾ, ಭಾಗ್ಯ, ಪ್ರತಿಮಾ ಹಾಗೂ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.