ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಎಸ್. ಶ್ವೇತ ಆಯ್ಕೆ
ಸುಮಾರು ೩೦ ವರ್ಷಗಳ ಹಿಂದೆ ಸ್ಥಾಪನೆಯಾದ ನಗರದ ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಥಮ ಮಹಿಳಾ ಅಧ್ಯಕ್ಷರಾಗಿ ನ್ಯಾಯವಾದಿ ಎಸ್. ಶ್ವೇತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭದ್ರಾವತಿ : ಸುಮಾರು ೩೦ ವರ್ಷಗಳ ಹಿಂದೆ ಸ್ಥಾಪನೆಯಾದ ನಗರದ ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಥಮ ಮಹಿಳಾ ಅಧ್ಯಕ್ಷರಾಗಿ ನ್ಯಾಯವಾದಿ ಎಸ್. ಶ್ವೇತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಂಗಳವಾರ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಪುರೋಹಿತರಾದ ಗುರುಪ್ರಸಾದ್ ಅವಿರೋಧವಾಗಿ ಆಯ್ಕೆಯಾದರು. ಸಹಕಾರ ಇಲಾಖೆ ಅಧಿಕಾರಿ ಸುಮ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ನಿರ್ದೇಶಕರಾದ ಜಯತೀರ್ಥ, ಮಧುಕೇಶ, ನಿಖಿಲ್, ಪ್ರಗತಿಪ್ರಸಾದ್, ಸಂತೊಷ್, ಶೇಷಾಚಲ ಮತ್ತು ಸತೀಶ್ ಅಯ್ಯರ್ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಸೊಸೈಟಿ ಕಾರ್ಯದರ್ಶಿಗಳಾದ ಎಂ.ವಿ ಶಶಿಧರ, ವಾಣಿ ಉಪಸ್ಥಿತರಿದ್ದರು.
ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಅಭಿನಂದಿಸಿದ್ದಾರೆ. ನೂತನ ಅಧ್ಯಕ್ಷೆ ಎಸ್. ಶ್ವೇತ ಅವರು ಪ್ರಸ್ತುತ ತಾಲೂಕು ವಕೀಲರ ಸಂಘದ ಖಜಾಂಚಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.