ಅಸಂಘಟಿತ ಕಾರ್ಮಿಕರಿಗೆ ಸೂಕ್ತ ಮಾಗದರ್ಶನ ನೀಡಿ ಜಾಗೃತಿಗೊಳಿಸುವ ಅಗತ್ಯವಿದೆ : ಕುಪೆಂದ್ರ ಆಯನೂರು

ಏ.5ರಂದು ಜಿಲ್ಲಾ ಮಟ್ಟದ ಜಾಗೃತಿ ಕಾರ್ಯಕ್ರಮ, ಸಂಸದ ಬಿ.ವೈ ರಾಘವೇಂದ್ರ ಉದ್ಘಾಟನೆ 

ಭದ್ರಾವತಿ ಪತ್ರಿಕಾಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ, ಹಿರಿಯ ಕಾರ್ಮಿಕ ಮುಖಂಡ ಕುಪೇಂದ್ರ ಆಯನೂರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಭದ್ರಾವತಿ: ರಾಜ್ಯದಲ್ಲಿ ಹಲವಾರು ಕಾರ್ಮಿಕ ಸಂಘಟನೆಗಳಿದ್ದರೂ ಸಹ ಅಸಂಘಟಿತ ಕಾರ್ಮಿಕರ ಸಮಸ್ಯೆಗಳು ಬಹಳಷ್ಟಿವೆ. ಈ ಹಿನ್ನಲೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಜಾಗೃತಿಗೊಳಿಸುವುದು ಅಗತ್ಯವಾಗಿದೆ ಎಂದು ರಾಜ್ಯ ಅಸಂಘಟಿತ ಕಾರ್ಮಿಕ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ, ಹಿರಿಯ ಕಾರ್ಮಿಕ ಮುಖಂಡ ಕುಪೇಂದ್ರ ಆಯನೂರು ಹೇಳಿದರು. 
ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ಲಭಿಸುತ್ತಿಲ್ಲ.  ಅಲ್ಲದೆ ಅಸಂಘಟಿತ ಕಾರ್ಮಿಕರು ಬಹಳಷ್ಟು ಶೋಷಣೆಗೆ ಒಳಗಾಗುತ್ತಿದ್ದಾರೆ. ಇವರ ಪರವಾಗಿ ಹೋರಾಡಲು ಬಲಿಷ್ಠವಾದ ಸಂಘಟನೆ ಅಗತ್ಯವಿದೆ. ಇದನ್ನು ಮನಗಂಡು ಈ ಸಂಘಟನೆಯನ್ನು ಹುಟ್ಟು ಹಾಕಲಾಗಿದೆ. ಈ ಸಂಘಟನೆ ಮೂಲಕ ರಾಜ್ಯಾದ್ಯಂತ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ ಎಂದರು. 
ಸಂಘದ ರಾಜ್ಯಾಧ್ಯಕ್ಷ ಪ್ರದೀಪ್ ಹೊನ್ನಪ್ಪ ಮಾತನಾಡಿ, ಜಿಲ್ಲೆಯಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಜಾಗೃತಿ ಮೂಡಿಸಲು ಜಿಲ್ಲಾ ಮಟ್ಟದ ಜಾಗೃತಿ ಕಾರ್ಯಕ್ರಮ ಏ.೫ರಂದು ಬೆಳಿಗ್ಗೆ ೧೦.೩೦ಕ್ಕೆ ಉಂಬ್ಳೆಬೈಲು ರಸ್ತೆ, ರೋಟರಿ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಂಸದ ಬಿ.ವೈ ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು, ಡಿ.ಎಸ್ ಅರುಣ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ರುದ್ರೇಗೌಡ, ಸಂಘಟನೆ ಮಹಾಪೋಷಕ ಹರ್ಷ ಕಾಮತ್, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಬಾರಂದೂರು ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. 
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಇಂದೂ ಬಿ. ಗೌಡ, ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಬಾರಂದೂರು ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ವಿನಿಗೌಡ, ಸಂಘಟನೆ ತಾಲೂಕು ನಗರ ಅಧ್ಯಕ್ಷೆ ರುಕ್ಮಿಣಿ ರಮೇಶ್, ಗ್ರಾಮಾಂತರ ಅಧ್ಯಕ್ಷೆ ಶಕುಂತಲ ಪ್ರದೀಪ್, ಗ್ರಾಮಾಂತರ ಉಪಾಧ್ಯಕ್ಷೆ ಸರಸ್ವತಿ ವಿಜಯಕುಮಾರ್, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಶಶಿಕಲಾ ಕುಮಾರ್, ತಾಲೂಕು ಪ್ರಧಾನ ಕಾರ್ಯದರ್ಶಿ ಶಾಂತಲ ಕುಮಾರಿ, ಜಿಲ್ಲಾ ಕಾರ್ಯದರ್ಶಿ ಲೋಕಾಕ್ಷಿ ರಾಜ್‌ಗುರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.