ಏ.೧೮ರಂದು ನಗರಸಭೆ ಸಾಮಾನ್ಯ ಸಭೆ


    ಭದ್ರಾವತಿ: ನಗರಸಭೆ ಸಾಮಾನ್ಯ ಸಭೆ ಏ.೧೮ರ ಶನಿವಾರ ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. 
    ಪ್ರಸಕ್ತ ಸಾಲಿನ ಬಜೆಟ್ ಮಂಡನೆ ನಂತರ ನಡೆಯುತ್ತಿರುವ ಮೊದಲ ಸಭೆ ಇದಾಗಿದ್ದು, ಹಲವಾರು ಸಮಸ್ಯೆಗಳ ಕುರಿತು ನಗರಸಭೆ ಆಡಳಿತ ಪಕ್ಷದ ಸದಸ್ಯರೇ ಬಜೆಟ್ ಮಂಡನೆ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಬೇಸಿಗೆ ಆರಂಭವಾಗಿದ್ದು, ಈ ನಡುವೆ ಕುಡಿಯುವ ನೀರು, ಸೊಳ್ಳೆ, ಬೀದಿನಾಯಿಗಳ ಹಾವಳಿ, ಅಸಮರ್ಪಕ ತ್ಯಾಜ್ಯ ನಿರ್ವಹಣೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣಗೊಂಡಿವೆ. ಈ ನಡುವೆ ಸಭೆ ನಡೆಯುತ್ತಿದ್ದು,  ನಗರಸಭೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗು ಸದಸ್ಯರು ಸಭೆಗೆ ಕಡ್ಡಾಯವಾಗಿ ಹಾಜರಾಗಿ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಕೆ.ಎನ್ ಹೇಮಂತ್ ಕೋರಿದ್ದಾರೆ.