ಏ.೧೮ರಂದು ನಗರಸಭೆ ಸಾಮಾನ್ಯ ಸಭೆ
ಭದ್ರಾವತಿ : ನಗರಸಭೆ ಸಾಮಾನ್ಯ ಸಭೆ ಏ.೧೮ರ ಶನಿವಾರ ಮಧ್ಯಾಹ್ನ ೩ ಗಂಟೆಗೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಂಗಣದಲ್ಲಿ ನಡೆಯಲಿದೆ.
ಈ ಬಾರಿ ಸಾಮಾನ್ಯಸಭೆ ಹೆಚ್ಚು ಗಮನ ಸೆಳೆಯುತ್ತಿದ್ದು, ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ನಂತರ ನಡೆಯುತ್ತಿರುವ ಸಭೆ ಇದಾಗಿದೆ. ಈ ನಡುವೆ ನೀರಿನ ಶುಲ್ಕ ತೆರಿಗೆ, ಆಸ್ತಿ ತೆರಿಗೆ ಹೆಚ್ಚಳ ಮಾಡಲಾಗಿದ್ದು, ಇದರಿಂದಾಗಿ ನಗರಸಭೆ ವ್ಯಾಪ್ತಿಯ ನಿವಾಸಿಗಳ ಆಕ್ರೋಶಕ್ಕೆ ತುತ್ತಾಗುವಂತಾಗಿದೆ. ಬೇಸಿಗೆ ಹಿನ್ನಲೆಯಲ್ಲಿ ಬಹುತೇಕ ವಾರ್ಡ್‌ಗಳಲ್ಲಿ ಹಲವಾರು ಸಮಸ್ಯೆಗಳು ಉಲ್ಬಣಗೊಂಡಿವೆ. ಈ ನಡುವೆ ಹಲವು ಪ್ರಮುಖ ಪ್ರಸ್ತಾವನೆಗಳ ಕುರಿತು ಚರ್ಚೆ ನಡೆಯಲಿದೆ. ಇದರಿಂದಾಗಿ ಈ ಬಾರಿ ಸಭೆ ಹೆಚ್ಚು ಗಮನ ಸೆಳೆಯುತ್ತಿದೆ.
ನಗರಸಭೆ ಸದಸ್ಯರು, ಅಧಿಕಾರಿಗಳು ಹಾಗು ಸಿಬ್ಬಂದಿಗಳು ತಪ್ಪದೇ ಸಭೆಗೆ ಹಾಜರಾಗಿ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಕೆ.ಎನ್ ಹೇಮಂತ್ ಕೋರಿದ್ದಾರೆ.