ಸುಮಾರು ೩ ದಶಕಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆ : ಪೇಪರ್‌ಟೌನ್ ಪೊಲೀಸರ ಕಾರ್ಯಾಚರಣೆ
ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಕಳೆದ ಸುಮಾರು ೩ ದಶಕಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪತ್ತೆ ಮಾಡುವಲ್ಲಿ ಪೇಪರ್‌ಟೌನ್ ಪೊಲೀಸ್ ಠಾಣೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಭದ್ರಾವತಿ : ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಕಳೆದ ಸುಮಾರು ೩ ದಶಕಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪತ್ತೆ ಮಾಡುವಲ್ಲಿ ಪೇಪರ್‌ಟೌನ್ ಪೊಲೀಸ್ ಠಾಣೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಮುಡ್ಲಾಗಿರಿ(೬೫) ಎಂಬುವರ ವಿರುದ್ಧ ಅಕ್ರಮ ಪ್ರವೇಶ, ಹಲ್ಲೆ ಹಾಗು ಜೀವ ಬೆದರಿಕೆ ಹಾಕಿದ ಆರೋಪದಡಿ ೧೯೯೧ರಲ್ಲಿ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಲಯದಲ್ಲಿ ವಿಚಾರಣೆಗೆ ಹಾಜರಾಗದೆ ಅಂದಿನಿಂದ ಆರೋಪಿ ತಲೆಮರೆಸಿಕೊಂಡಿದ್ದು, ಈ ಸಂಬಂಧ ಪಿಸಿಜೆ & ಜೆಎಂಎಫ್‌ಸಿ ನ್ಯಾಯಾಲಯ ೧೯೯೪ರಲ್ಲಿ ಆರೋಪಿ ವಿರುದ್ಧ ದಸ್ತಗಿರಿ ವಾರೆಂಟ್ ಹೊರಡಿಸಿತ್ತು.
ಆರೋಪಿ ಪತ್ತೆಗಾಗಿ ಠಾಣೆಯ ಉಪ ನಿರೀಕ್ಷಕ ಎನ್. ಕುಮಾರ್ ನೇತೃತ್ವದಲ್ಲಿ ಸಹಾಯಕ ಉಪ ನಿರೀಕ್ಷಕ ಕುಮಾರ್, ಹೆಡ್ ಕಾನ್‌ಸ್ಟೇಬಲ್ ಯಲ್ಲಪ್ಪ, ಜಿಲ್ಲಾ ಪೊಲೀಸ್ ಕಛೇರಿಯ ಎಎನ್‌ಸಿ ವಿಭಾಗದ ಹೆಡ್ ಕಾನ್‌ಸ್ಟೇಬಲ್‌ಗಳಾದ ಇಂದ್ರೇಶ್ ಮತ್ತು ಗುರುರಾಜ್ ಅವರನ್ನೊಳಗೊಂಡ ತಂಡ ರಚಿಸಲಾಗಿತ್ತು.
ಬೆಂಗಳೂರಿನ ಪೀಣ್ಯದಲ್ಲಿ ವಾಸವಾಗಿದ್ದ ಆರೋಪಿಯನ್ನು ಪತ್ತೆ ಮಾಡಲು ತಂಡ ಯಶಸ್ವಿಯಾಗಿದ್ದು, ಏ.೧೦ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
