ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾರದ ಮಾರ್ಗ ಪಥಸಂಚಲನ

ರೌಡಿಶೀಟರ್ ಮನೆಗಳ ಪರಿಶೀಲನೆ, ಚಲನವಲನಗಳ ಮೇಲೆ ನಿಗಾ 


ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕ ರಮೇಶ್‌ರವರ ನೇತೃತ್ವದಲ್ಲಿ ಪಥಸಂಚಲನ ನಡೆಸಲಾಯಿತು. ಅಲ್ಲದೆ ರೌಡಿಶೀಟರ್‌ಗಳ ಮನೆಗಳಿಗೆ ತೆರಳಿ ತಪಾಸಣೆ ನಡೆಸಿ, ಅವರ ಗುಣ, ನಡೆತೆ ಪರಿಶೀಲಿಸಲಾಯಿತು. ಅವರ ಚಲನವಲನಗಳ ಮೇಲೆ ನಿಗಾವಹಿಸಲಾಗಿದೆ. 
    ಭದ್ರಾವತಿ : ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಾದ್ಯಂತ ಸಮುದಾಯದಲ್ಲಿ ಶಾಂತಿ-ಸೌಹಾರ್ದತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹಲವು ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಈ ಪೈಕಿ ವಾರದ ಮಾರ್ಗ ಪಥಸಂಚಲನ(ರೂಟ್ ಮಾರ್ಚ್) ನಡೆಸಲಾಗುತ್ತಿದೆ. 
    ಪ್ರತಿ ಭಾನುವಾರ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಠಾಣಾ ಉಪ ನಿರೀಕ್ಷಕರ ನೇತೃತ್ವದಲ್ಲಿ ಪಥ ಸಂಚಲನ ನಡೆಸಲಾಗುತ್ತಿದೆ. ನಿವಾಸಿಗಳು ಯಾವುದೇ ರೀತಿ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಸುರಕ್ಷತೆಗೆ ಮೊದಲ ಆದ್ಯತೆ, ನಿಮ್ಮೊಂದಿಗೆ ನಾವಿದ್ದೇವೆ ಎಂಬ ಭರವಸೆ ಮೂಡಿಸುವ ನಿಟ್ಟಿನಲ್ಲಿ ಇಲ್ಲಿನ ನ್ಯೂಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕ ರಮೇಶ್‌ರವರ ನೇತೃತ್ವದಲ್ಲಿ ಪಥಸಂಚಲನ ನಡೆಸಲಾಯಿತು. ಅಲ್ಲದೆ ರೌಡಿಶೀಟರ್‌ಗಳ ಮನೆಗಳಿಗೆ ತೆರಳಿ ತಪಾಸಣೆ ನಡೆಸಿ, ಅವರ ಗುಣ, ನಡೆತೆ ಪರಿಶೀಲಿಸಲಾಯಿತು. ಅವರ ಚಲನವಲನಗಳ ಮೇಲೆ ನಿಗಾವಹಿಸಲಾಗಿದೆ. 
    ಠಾಣೆಯ ಉಪ ನಿರೀಕ್ಷಕಿ ಕವಿತಾ ಹಾಗು ಸಹಾಯಕ ಉಪ ನಿರೀಕ್ಷಕರು ಮತ್ತು ಸಿಬ್ಬಂದಿ ವರ್ಗದವರು ರ್ಮಾ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.