ಶ್ರಮ ಜೀವಿಗಳಾದ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಬಿ.ಕೆ ಮೋಹನ್


ಭದ್ರಾವತಿ ನಗರದ ಬೈಪಾಸ್ ರಸ್ತೆ ಕಾರ್ಮಿಕರ ಸಮುದಾಯ ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ವಿವಿಧ ವೃತ್ತಿಗಳ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಪೂರ್ವ ಕಲಿಕೆಯ ಮಾನ್ಯತೆ(ಆರ್‌ಪಿಎಲ್), ಸುರಕ್ಷತಾ ಕಿಟ್‌ಗಳ ವಿತರಣೆ ಮತ್ತು ಸೇತುಬಂಧ ತರಬೇತಿ ಮುಕ್ತಾಯಗೊಳಿಸಿರುವ ಕಾರ್ಮಿಕರಿಗೆ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.  
    ಭದ್ರಾವತಿ: ಶ್ರಮ ಜೀವಿಗಳಾದ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳು ಪ್ರಾಮಾಣಿಕವಾಗಿ ತಲುಪಬೇಕು. ಈ ನಿಟ್ಟಿನಲ್ಲಿ ಶಾಸಕರು ಹೆಚ್ಚಿನ ಕಾಳಜಿವಹಿಸಿದ್ದು, ಎಲ್ಲಾ ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುತ್ತಿದ್ದಾರೆಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು. 
    ಅವರು ಗುರುವಾರ ನಗರದ ಬೈಪಾಸ್ ರಸ್ತೆ ಕಾರ್ಮಿಕರ ಸಮುದಾಯ ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ವೃತ್ತಿಗಳ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಪೂರ್ವ ಕಲಿಕೆಯ ಮಾನ್ಯತೆ(ಆರ್‌ಪಿಎಲ್), ಸುರಕ್ಷತಾ ಕಿಟ್‌ಗಳ ವಿತರಣೆ ಮತ್ತು ಸೇತುಬಂಧ ತರಬೇತಿ ಮುಕ್ತಾಯಗೊಳಿಸಿರುವ ಕಾರ್ಮಿಕರಿಗೆ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 

    ರಾಜ್ಯದ ಕಾಂಗ್ರೆಸ್ ಸರ್ಕಾರ ಶ್ರಮಿ ಜೀವಿಗಳಾದ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಕಾರ್ಮಿಕರು ಈ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಮಿಕರಿದ್ದು, ಶಾಸಕರು ಮೊದಲ ಆದ್ಯತೆ ಕಾರ್ಮಿಕರಿಗೆ ನೀಡುತ್ತಿದ್ದಾರೆ. ಕಾರ್ಮಿಕರು ನೆಮ್ಮದಿಯಾಗಿ ಬದುಕಬೇಕು. ಕಾರ್ಮಿಕರ ಕಲ್ಯಾಣದಿಂದ ಮಾತ್ರ ನಮ್ಮ ಬೆಳವಣಿಗೆ ಸಾಧ್ಯ ಎಂಬುದನ್ನು ಶಾಸಕರು ಮನಗಂಡಿದ್ದಾರೆ. ಈ ಹಿನ್ನಲೆಯಲ್ಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿಕೊಂಡು ಬರುತ್ತಿದ್ದಾರೆ ಎಂದರು. 
    ಕಾರ್ಮಿಕರೆಲ್ಲರೂ ಒಗ್ಗಟ್ಟಾಗಬೇಕು. ಸಂಘಟನೆಗಳಲ್ಲಿ ಭಿನ್ನಾಭಿಪ್ರಾಯಗಳು ಇರಬಾರದು. ಕಾರ್ಮಿಕರು ಸಹ ಸದೃಢವಾಗಿ ಬಲಗೊಳ್ಳಬೇಕು. ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗು ಶೈಕ್ಷಣಿಕವಾಗಿ ಸಹ ಬೆಳವಣಿಗೆ ಸಾಧಿಸಬೇಕು ಎಂದರು. 


ಭದ್ರಾವತಿ ನಗರದ ಬೈಪಾಸ್ ರಸ್ತೆ ಕಾರ್ಮಿಕರ ಸಮುದಾಯ ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ವಿವಿಧ ವೃತ್ತಿಗಳ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಪೂರ್ವ ಕಲಿಕೆಯ ಮಾನ್ಯತೆ(ಆರ್‌ಪಿಎಲ್), ಸುರಕ್ಷತಾ ಕಿಟ್‌ಗಳ ವಿತರಣೆ ಮತ್ತು ಸೇತುಬಂಧ ತರಬೇತಿ ಮುಕ್ತಾಯಗೊಳಿಸಿರುವ ಕಾರ್ಮಿಕರಿಗೆ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮದಲ್ಲಿ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಪಾಲ್ಗೊಂಡು ಮಾತನಾಡಿದರು. 
    ಕಾರ್ಮಿಕ ಮುಖಂಡ ಸುಂದರ್‌ಬಾಬು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಸ್ತುತ ಕ್ಷೇತ್ರದಲ್ಲಿ ಕಾರ್ಮಿಕರ ಯಾವುದೇ ರೀತಿಯ ಸಮಸ್ಯೆಗಳಿರಲಿ ಶಾಸಕರು ತಕ್ಷಣ ಸ್ಪಂದಿಸುವ ಮೂಲಕ ಬಗೆಹರಿಸುತ್ತಿದ್ದಾರೆ. ಕಾರ್ಮಿಕರ ಮೇಲೆ ಹೆಚ್ಚಿನ ಕಾಳಜಿವಹಿಸಿದ್ದಾರೆ. ಇದರಿಂದಾಗಿ ಕಾರ್ಮಿಕರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾಧ್ಯವಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಹಕಾರ ಅವರಿಂದ ನಿರೀಕ್ಷಿಸುತ್ತಿದ್ದಾರೆ ಎಂದರು.  
    ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ನಗರಸಭೆ ಸದಸ್ಯ ಚನ್ನಪ್ಪ, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದು ಮಾತನಾಡಿದರು. 
    ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾರ್ಮಿಕರು ಸಹ ಎಲ್ಲರಂತೆ ನೆಮ್ಮದಿ ಜೀವನ ನಡೆಸಬೇಕು. ಇದಕ್ಕೆ ಪೂರಕವಾಗಿ ಎಲ್ಲಾ ರೀತಿಯ ಸಹಕಾರ ನೀಡಲು ಬದ್ದನಾಗಿದ್ದೇನೆ ಎಂದರು. 
    ಕಾರ್ಮಿಕ ಮುಖಂಡರಾದ ಸಂಜೀವ ಕುಮಾರ್, ತ್ಯಾಗರಾಜ್, ವಿ. ವಿನೋದ್, ರಾಧಾಕೃಷ್ಣ, ಚಿನ್ನಪ್ಪ, ಡಾ. ಚಂದ್ರಶೇಖರ್, ನಗರಸಭೆ ಸದಸ್ಯ ಸಯ್ಯದ್ ರಿಯಾಜ್, ಕಾರ್ಮಿಕ ನಿರೀಕ್ಷಕರಾದ ರಕ್ಷಿತ್ ಮತ್ತು ಸುಪ್ರಿಯಾ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವ ಮುಖಂಡ ವಿಜಯ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.