ಖರ್ಗೆ ದ್ವೇಷ ಭಾಷಣ : ಯುವ ಮೋರ್ಚಾದಿಂದ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಆರ್‌ಎಸ್‌ಎಸ್ ಹಾಗು ಬಿಜೆಪಿ ಕುರಿತು ದ್ವೇಷ ಭಾಷಣ ಮಾಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಭದ್ರಾವತಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಶುಕ್ರವಾರ ದೂರು ನೀಡಲಾಯಿತು.
ಭದ್ರಾವತಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಆರ್‌ಎಸ್‌ಎಸ್ ಹಾಗು ಬಿಜೆಪಿ ಕುರಿತು ದ್ವೇಷ ಭಾಷಣ ಮಾಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಶುಕ್ರವಾರ ದೂರು ನೀಡಲಾಯಿತು.
ಮಲ್ಲಿಕಾರ್ಜುನ ಖರ್ಗೆಯವರು ಪ್ರಚಾರದ ಸಂದರ್ಭದಲ್ಲಿ `ಖುರಾನ್‌ನಲ್ಲಿ ಬರೆದಿದೆ ವಿಷ ಸರ್ಪಗಳನ್ನು ಕಂಡರೆ ಕೊಲ್ಲಬೇಕು. ಆರ್‌ಎಸ್‌ಎಸ್ ಹಾಗೂ ಬಿಜೆಪಿ ಅದೇ ವಿಷ ಸರ್ಪಗಳು. ಅವುಗಳನ್ನು ಕೊಲ್ಲಬೇಕು, ಇಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ. ನಮಾಜ್ ಮಾಡುವ ಸಂದರ್ಭದಲ್ಲಿಯಾದರೂ ಅದನ್ನು ಬಿಟ್ಟು ಕೊಲ್ಲಬೇಕು.' ಎಂಬುದಾಗಿ ದ್ವೇಷ ಭಾಷಣ ಮಾಡಿರುವುದು ಖಂಡನೀಯ. ತಕ್ಷಣ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಮಂಡಲ ಯುವ ಮೋರ್ಚಾ ನೇತೃತ್ವದಲ್ಲಿ ಹಳೇನಗರ ಪೊಲೀಸ್ ಠಾಣಾ ಉಪ ನಿರೀಕ್ಷಕ ಸುನೀಲ್ ಬಿ. ತೇಲಿ, ಪೇಪರ್ ಟೌನ್ ಪೊಲೀಸ್ ಠಾಣಾ ಉಪ ನಿರೀಕ್ಷಕ ಎನ್. ಕುಮಾರ್, ನ್ಯೂಟೌನ್ ಪೊಲೀಸ್ ಠಾಣಾ ಉಪ ನಿರೀಕ್ಷಕ ಟಿ. ರಮೇಶ್ ಅವರಿಗೆ ದೂರು ಸಲ್ಲಿಸಲಾಯಿತು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಯುವ ಮೋರ್ಚಾ ಅಧ್ಯಕ್ಷ ಪ್ರಜ್ವಲ್ ನಂಜುಂಡಯ್ಯ, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಪ್ರದೀಪ್ ಗೌಡರ್, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಘುರಾವ್, ಎಂ. ಮಂಜುನಾಥ್, ಎಂ.ಎಸ್ ಸುರೇಶಪ್ಪ, ಜಿ.ವಿ ಕುಮಾರ್, ಅಶೋಕ್‌ರಾವ್ ಸಿಂಧೆ, ಧನುಷ್ ಬೋಸ್ಲೆ, ಅನ್ನಪೂರ್ಣ, ಪ್ರೇಮಾ ಸೇರಿದಂತೆ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

.jpeg)