ದಲಿತ ಕಾಲೋನಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ


ಭದ್ರಾವತಿ ತಾಲೂಕಿನ ದಲಿತ ಕಾಲೋನಿಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್‌ರವರಿಗೆ ಸಾಮಾಜಿಕ ಹೋರಾಟಗಾರ ಪಿ. ತೀರ್ಥೇಶ್ ಮನವಿ ಸಲ್ಲಿಸಿದ್ದಾರೆ. 
    ಭದ್ರಾವತಿ : ತಾಲೂಕಿನ ದಲಿತ ಕಾಲೋನಿಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್‌ರವರಿಗೆ ಸಾಮಾಜಿಕ ಹೋರಾಟಗಾರ ಪಿ. ತೀರ್ಥೇಶ್ ಮನವಿ ಸಲ್ಲಿಸಿದ್ದಾರೆ. 
    ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಳಿಂಗನಹಳ್ಳಿಯಲ್ಲಿ ಅಕ್ರಮ ಮದ್ಯ ಮಾರಾಟದ ಮಳಿಗೆಯ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲು ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ಪ್ರಕರಣದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಹಕಾರ ನೀಡುತ್ತಿರುವ ಪರವಾನಗಿ ಪಡೆದ ಮದ್ಯದಂಗಡಿ ಮಾಲೀಕರನ್ನು ಪತ್ತೆಹಚ್ಚುವ ಮೂಲಕ ಅವರ ವಿರುದ್ಧ ಸಹ ಪ್ರಕರಣ ದಾಖಲಿಸುವುದು. ಅಲ್ಲದೆ ಅಬಕಾರಿ ಇಲಾಖೆಗೆ ಈ ಕುರಿತು ಸಮಗ್ರ ಮಾಹಿತಿ ನೀಡಿ ಮದ್ಯದಂಗಡಿ ಮುಚ್ಚಿಸಲು ಕ್ರಮ ಕೈಗೊಳ್ಳಬೇಕೆಂದು ಕೋರಲಾಗಿದೆ. 
    ತಾಲೂಕಿನ ಎಲ್ಲಾ ದಲಿತ ಕಾಲೋನಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಇಲಾಖೆಯ ಸಿಬ್ಬಂದಿಗಳಿಂದ ಹಾಗು ಸ್ಥಳೀಯ ನಿವಾಸಿಗಳಿಂದ ಮಾಹಿತಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು. ಒಟ್ಟಾರೆ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕೆಂದು ವಿನಂತಿಸಲಾಗಿದೆ.