ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಅರಳಿಹಳ್ಳಿ ಸರ್ಕಾರಿ ಶಾಲೆಗೆ ಶೇ.೯೩ರಷ್ಟು ಫಲಿತಾಂಶ
ಪಿ.ಎಲ್ ರಮ್ಯಾ
ಭದ್ರಾವತಿ: ತಾಲೂಕಿನ ಸರ್ಕಾರಿ ಶಾಲೆಗಳ ಪೈಕಿ ಅತಿ ದೊಡ್ಡ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗ್ರಾಮೀಣ ಭಾಗದ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೯೩ರಷ್ಟು ಫಲಿತಾಂಶ ಪಡೆದುಕೊಂಡಿದೆ.
ಪರೀಕ್ಷೆಗೆ ಹಾಜರಾಗಿದ್ದ ಒಟ್ಟು ೧೮೧ ವಿದ್ಯಾರ್ಥಿಗಳಲ್ಲಿ ಪೈಕಿ ೧೬೮ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಾಲೆಯ ಪಿ.ಎಲ್ ರಮ್ಯಾ-೬೦೮ ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ ಸ್ಥಾನ ಮತ್ತು ಡಿ. ಕೀರ್ತನ ೬೦೫ ಅಂಕಗಳೊಂದಿಗೆ ದ್ವೀತೀಯ ಸ್ಥಾನ ಪಡೆದು ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ.
೧೧ ವಿದ್ಯಾರ್ಥಿಗಳು ಅತ್ಯುನ್ನತ, ೭೬ ವಿದ್ಯಾರ್ಥಿಗಳು ಪ್ರಥಮ ದರ್ಜೆ, ೪೦ ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ ೪೧ ವಿದ್ಯಾರ್ಥಿಗಳು ಸಾಮಾನ್ಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಬಹುತೇಕ ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ಸರ್ಕಾರಿ ಶಾಲೆ ಇದಾಗಿದ್ದು, ಒಟ್ಟು ೨೨ ಶಿಕ್ಷಕರು ಈ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಒಟ್ಟು ಶಾಲೆಯಲ್ಲಿ ಸುಮಾರು ೫೦೦ಕ್ಕೂ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇದೊಂದು ಹೆಮ್ಮೆಯ ವಿಚಾರವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸುವಂತೆ ಶಾಲೆ ಮುಖ್ಯಶಿಕ್ಷಕರು ಕೋರಿದ್ದಾರೆ.

.jpeg)