ವಿಇಎಸ್ ವಿದ್ಯಾಸಂಸ್ಥೆಯಲ್ಲಿ `ಗ್ರಾಜುಯೇಷನ್ ಡೇ' : ಗಮನ ಸೆಳೆದ ಪುಟಾಣಿ ಮಕ್ಕಳು


ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭದ್ರಾವತಿ ತಾಲೂಕು ಸಂಘದ ಆಶ್ರಿತದ ನಗರದ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯಲ್ಲಿ  ಪೂರ್ವ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ  `ಗ್ರಾಜುಯೇಷನ್ ಡೇ' ನಡೆಸಲಾಯಿತು. 
    ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಆಶ್ರಿತದ ನಗರದ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯಲ್ಲಿ  ಪೂರ್ವ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ  `ಗ್ರಾಜುಯೇಷನ್ ಡೇ' ನಡೆಸಲಾಯಿತು. 
  ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪೂರ್ವ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾಥಿಗಳು ಎಲ್ಲರ ಗಮನ ಸೆಳೆದರು. ಇದೊಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು, ಮಕ್ಕಳಲ್ಲಿ ಆತ್ಮ ವಿಶ್ವಾಸ ಬೆಳೆಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂಬ ಭಾವನೆ ವ್ಯಕ್ತವಾಯಿತು. 
    ವಿದ್ಯಾ ಸಂಸ್ಥೆ ಆಡಳಿತ ಅಧಿಕಾರಿ ಡಾ. ಎಸ್. ಪಿ ರಾಕೇಶ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ,  ಮುಖ್ಯೋಪಾಧ್ಯಾಯಿನಿ ಕೆ. ಚೈತ್ರ, ಎಂ. ಹೇಮಾವತಿ ಹಾಗೂ ಕಿರಣ್ ಮತ್ತು ಶಿಕ್ಷಕ ವೃಂದ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.