ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದ ಸರಕು ತುಂಬಿದ ಲಾರಿ
ಭದ್ರಾವತಿ ನಗರದ ಬೈಪಾಸ್ ರಸ್ತೆಯಲ್ಲಿ ಗುರುವಾರ ಸಂಜೆ ಸರಕು ತುಂಬಿಕೊಂಡು ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹಳ್ಳಕ್ಕೆ ಉರುಳಿ ಬಿದ್ದಿರುವ ಘಟನೆ ನಡೆದಿದೆ.
ಭದ್ರಾವತಿ : ನಗರದ ಬೈಪಾಸ್ ರಸ್ತೆಯಲ್ಲಿ ಗುರುವಾರಸಂಜೆ ಸರಕು ತುಂಬಿಕೊಂಡು ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹಳ್ಳಕ್ಕೆ ಉರುಳಿ ಬಿದ್ದಿರುವ ಘಟನೆ ನಡೆದಿದೆ.
ಹೊಸಕೋಟೆಯಿಂದ ಸರಕು ತುಂಬಿಕೊಂಡು ಬರುತ್ತಿದ್ದ ಲಾರಿ ಬೈಪಾಸ್ ರಸ್ತೆ, ಉಜ್ಜನೀಪುರ ಬಳಿ ರಸ್ತೆಯಲ್ಲಿ ಜಾನುವಾರು ಅಡ್ಡ ಬಂದ ಹಿನ್ನಲೆಯಲ್ಲಿ ಅಪಘಾತ ತಪ್ಪಿಸಲು ಹೋಗಿ ರಸ್ತೆಯ ಪಕ್ಕಕ್ಕೆ ಲಾರಿ ಇಳಿಸಲಾಗಿದ್ದು, ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹಳ್ಳಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ.
ಘಟನೆಯಲ್ಲಿ ಚಾಲಕನಿಗೆ ಸ್ವಲ್ಪ ಪ್ರಮಾಣದಲ್ಲಿ ಗಾಯಗಳಾಗಿದ್ದು, ಲಾರಿ ಸ್ವಲ್ಪ ಜಖಂಗೊಂಡಿದೆ. ಅಲ್ಲದೆ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ವಿದ್ಯುತ್ ತಂತಿ ಕತ್ತರಿಸಿ ಹೋಗಿದೆ. ಸರಕು ತುಂಬಿದ ಲಾರಿ ಶಿವಮೊಗ್ಗ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ತೆರಳುತ್ತಿತ್ತು.