ಅಬಕಾರಿ ಕಛೇರಿಯಲ್ಲಿ ಅಂಬೇಡ್ಕರ್ ಜಯಂತಿ
ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಭದ್ರಾವತಿ ಹಳೇನಗರದ ಪತ್ರಿಕಾ ಭವನ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಬಕಾರಿ ಕಛೇರಿಯಲ್ಲಿ ಮಂಗಳವಾರ ಆಚರಿಸಲಾಯಿತು.
ಭದ್ರಾವತಿ: ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಹಳೇನಗರದ ಪತ್ರಿಕಾ ಭವನ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಬಕಾರಿ ಕಛೇರಿಯಲ್ಲಿ ಆಚರಿಸಲಾಯಿತು.
ಕಳೆದ ಹಲವಾರು ವರ್ಷಗಳಿಂದ ನಗರದ ಹೊಸ ಸೇತುವೆ ರಸ್ತೆ, ಸಿದ್ದಾರೂಢನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಬಕಾರಿ ಕಛೇರಿಗೆ ಕೆಲವು ತಿಂಗಳ ಹಿಂದೆ ಪತ್ರಿಕಾಭವನ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು, ಪ್ರತಿ ವರ್ಷದಂತೆ ಈ ಬಾರಿ ಸಹ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜನ್ಮದಿನ ಆಚರಿಸಲಾಯಿತು. ಅಬಕಾರಿ ನಿರೀಕ್ಷಕ ಹಾಲನಾಯ್ಕ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಬಕಾರಿ ಉಪ ನಿರೀಕ್ಷಕರು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
