ಕರ್ತವ್ಯ ನಿರ್ವಹಿಸುವಾಗ ದುರ್ಘಟನೆ ನಡೆದು ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕ ಸಾವು
ವಿನೋದ್
ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಸಂಭವಿಸಿದ ದುರ್ಘಟನೆಯಲ್ಲಿ ಸೋಮವಾರ ರಾತ್ರಿ ಸುಮಾರು ೭.೩೦ರ ಸಮಯದಲ್ಲಿ ಗುತ್ತಿಗೆ ಕಾರ್ಮಿಕರ ಸಂಘದ ಮಾಜಿ ಉಪಾಧ್ಯಕ್ಷ ವಿನೋದ್‌ರವರು ಮೃತಪಟ್ಟಿರುವ ಘಟನೆ ನಡೆದಿದೆ.
ಕಾರ್ಖಾನೆಯ ಟ್ರಾಫಿಕ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿನೋದ್‌ರವರು ಸಂಜೆ ೬.೩೦ರ ಸಮಯದಲ್ಲಿ ಬಿಲ್ಲೆಟ್ ಇಳಿಸುವಾಗ ದುರ್ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸುವಾಗ ಮೃತಪಟ್ಟಿದ್ದಾರೆ.
೩೫ ವರ್ಷದ ವಿನೋದ್‌ರವರು ಜನ್ನಾಪುರ ರಾಜಪ್ಪ ಬಡಾವಣೆಯಲ್ಲಿ ವಾಸವಾಗಿದ್ದು, ಪತ್ನಿ ಹಾಗು ಒಂದು ಹೆಣ್ಣು ಮಗು ಇದೆ. ಈ ದುರ್ಘಟನೆಯಿಂದ ಗುತ್ತಿಗೆ ಕಾರ್ಮಿಕರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.
