ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ : ಅವಹೇಳನಕಾರಿ ಹೇಳಿಕೆಗೆ ಖಂಡನೆ
ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಮಾನವ ಸರಪಳಿ, ರಸ್ತೆ ತಡೆ ನಡೆಸಿ ಆಕ್ರೋಶ
ಪ್ರಧಾನಿ ನರೇಂದ್ರ ಮೋದಿರವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಗುರುವಾರ ಭದ್ರಾವತಿ ನಗರದ ಹಾಲಪ್ಪ ವೃತ್ತದಲ್ಲಿ ಯುವ ಮೋರ್ಚಾ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಮಾನವ ಸರ್ಪಳಿ, ರಸ್ತೆ ತಡೆ, ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಭದ್ರಾವತಿ : ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ಅವಧಿಯಲ್ಲಿ ಪುಲ್ವಾಮಾ ದಾಳಿಯಲ್ಲಿ ೪೪ ಸೈನಿಕರು ಹುತಾತ್ಮರಾದಾಗ ಪಾಕ್ ಆಕ್ರಮಿತ ಪ್ರದೇಶದ ಒಳಗೆ ನುಗ್ಗಿ ಸುಮಾರು ೩೦೦ ಭಯೋತ್ಪಾದಕರನ್ನು ಸಂಹರಿಸಲಾಯಿತು. ೨೫ಕ್ಕೂ ಹೆಚ್ಚು ದೇಶಗಳು ತಮ್ಮ ದೇಶದ ಅತ್ಯುನ್ನತ ಪ್ರಶಸ್ತಿಯ ಗೌರವವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿ ಸನ್ಮಾನಿಸಿವೆ. ಇಡೀ ವಿಶ್ವವೇ ಅವರನ್ನು ವಿಶ್ವ ನಾಯಕ, ವಿಶ್ವಗುರು ಎಂದು ಕೊಂಡಾಡುತ್ತಿವೆ. ಇಂತಹ ಗೌರವಾನ್ವಿತ ಪ್ರಧಾನ ಮಂತ್ರಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಆವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿರವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಗುರುವಾರ ನಗರದ ಹಾಲಪ್ಪ ವೃತ್ತದಲ್ಲಿ ಯುವ ಮೋರ್ಚಾ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಮಾನವ ಸರ್ಪಳಿ, ರಸ್ತೆ ತಡೆ ನಡೆಸಿ ಪ್ರತಿಭಟಿಸಿ ಮಾತನಾಡಿದರು.
೧೯೯೩ರಲ್ಲಿ ಉಗ್ರರಿಂದ ಮುಂಬೈ ಸರಣಿ ಬಾಂಬ್ ಸ್ಪೋಟ ನಡೆದಾಗ ೨೫೭ ಜನ ದಾಳಿಯಲ್ಲಿ ಸಾವನ್ನಪ್ಪಿದ್ದರು. ಕಾಂಗ್ರೆಸ್ ಪಕ್ಷದ ಪಿ.ವಿ ನರಸಿಂಹರಾವ್ ಪ್ರಧಾನಿಯಾಗಿದ್ದರು. ಆಗ ಯಾವುದೇ ಕ್ರಮ ಕೈಗೊಂಡಿಲ್ಲ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಉಗ್ರರ ವಿರುದ್ಧ ಸಹ ಯಾವುದೇ ಕ್ರಮ ಕೈಗೊಂಡಿಲ್ಲ . ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಮತ್ತು ಯುವ ಮೋರ್ಚಾ ಅಧ್ಯಕ್ಷರಾದ ಬಿ.ಎಸ್ ಭರತ್ ಹಾಗು ಪ್ರಜ್ವಲ್ ನಂಜುಂಡಯ್ಯ ನೇತೃತ್ವವಹಿಸಿದ್ದರು.
ಪಕ್ಷದ ಮುಖಂಡರಾದ ಮಂಗೋಟೆ ರುದ್ರೇಶ್, ಪ್ರಧಾನ ಕಾರ್ಯದರ್ಶಿಗಳಾದ ಮೊಸರಳ್ಳಿ ಅಣ್ಣಪ್ಪ, ಹನುಮಂತನಾಯ್ಕ, ರಘುರಾವ್, ಎಂ. ಮಂಜುನಾಥ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಿಖಿತ್, ಮಹಿಳಾ ಪ್ರಮುಖರಾದ ಶಕುಂತಲಾ ಪ್ರದೀಪ್, ಆಶಾ ಪುಟ್ಟಸ್ವಾಮಿ ಹಾಗೂ ಮಂಡಲ, ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
