ಕೇಂದ್ರದ ಮಾಜಿ ಸಚಿವೆ ಮೋಹಿಸಿನಾ ಕಿದ್ವಾಯಿ ನಿಧನಕ್ಕೆ ಶಾಸಕ ಸಂಗಮೇಶ್ವರ್ ಸಂತಾಪ
ಮೋಹಿಸಿನಾ ಕಿದ್ವಾಯಿ
ಭದ್ರಾವತಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ಮೋಹಿಸಿನಾ ಕಿದ್ವಾಯಿ ಅವರ ನಿಧನಕ್ಕೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಂತಾಪ ಸೂಚಿಸಿದ್ದಾರೆ.
ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ರಾಷ್ಟ್ರಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ಮೋಹಿಸಿನಾ ಕಿದ್ವಾಯಿಯವರು ದೇಶದ ರಾಜಕಾರಣದ ಧೀಮಂತ ಶಕ್ತಿಯಾಗಿದ್ದರು. ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರಾಗಿ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಪ್ರಮುಖ ಸದಸ್ಯರಾಗಿ ಸಲ್ಲಿಸಿದ ಸೇವೆ ಅಪಾರವಾಗಿದೆ. ಪಕ್ಷದ ಅತ್ಯಂತ ಕಠಿಣ ಸಂದರ್ಭಗಳಲ್ಲಿಯೂ ದಾರಿದೀಪವಾಗಿ ಬಲವರ್ಧನೆಗೆ ಶ್ರಮಿಸಿದ್ದರು.
ಇವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷ ಮತ್ತು ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಇವರ ಆತ್ಮಕ್ಕೆ ಸದ್ಗತಿ ನೀಡಲಿ ಹಾಗು ಇವರ ಕುಟುಂಬ, ಅಭಿಮಾನಿ ವರ್ಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಸಂತಾಪ ಸೂಚಿಸಿದ್ದಾರೆ.
