ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿಇಎಸ್ ವಿದ್ಯಾಸಂಸ್ಥೆಗೆ ಶೇ.೧೦೦ ಫಲಿತಾಂಶ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಆಶ್ರಿತದ ಭದ್ರಾವತಿ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಆಂಗ್ಲ ಮತ್ತು ಕನ್ನಡ ಪ್ರೌಢಶಾಲಾ ವಿಭಾಗ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಪಡೆದುಕೊಂಡಿದೆ. ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಆಂಗ್ಲ ಮತ್ತು ಕನ್ನಡ ಪ್ರೌಢಶಾಲಾ ವಿಭಾಗ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಪಡೆದುಕೊಂಡಿದೆ.
ಆಂಗ್ಲ ಪ್ರೌಢಶಾಲೆ ವಿಭಾಗದ ವಿ.ಎ ಕಿರಣ್ ೬೨೫ಕ್ಕೆ ೬೧೭ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ. ಉಳಿದಂತೆ ಎಂ. ಸಿಂಚನ ೫೯೪, ಪಿ.ಜಿ ತನುಶ್ರೀ ೫೭೫, ಟಿ. ಮುಕ್ತಿರಾಜ್ ೫೭೨, ಸೌದಾ ಖಾನ್ ೫೬೯ ಮತ್ತು ಬಿ.ಜಿ ನಕ್ಷತ್ರ ಹೆಚ್ಚಿನ ಅಂಕಗಳನ್ನು ಪಡೆದು ವಿದ್ಯಾಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಒಟ್ಟಾರೆ ಆಂಗ್ಲ ಮಾಧ್ಯಮದಲ್ಲಿ ೫ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, ೨೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಕನ್ನಡ ಪ್ರೌಢಶಾಲೆ ವಿಭಾಗದಲ್ಲಿ ವಿ. ಅಮೃತ ವಿ ೫೬೨ ಮತ್ತು ಎಲಾಂನಾಸ್ ೫೩೧ ಅಂಕಗಳನ್ನು ಪಡೆಯುವುದರ ಮೂಲಕ ವಿದ್ಯಾಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ವಿದ್ಯಾಸಂಸ್ಥೆ ಪ್ರಧಾನ ಪೋಷಕರಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ, ಆಡಳಿತ ಮಂಡಳಿ ಅಧ್ಯಕ್ಷ ಬಿ. ಸಿದ್ದಬಸಪ್ಪ, ಕಾರ್ಯಾಧ್ಯಕ್ಷ ಡಾ. ಎಂ. ವೆಂಕಟೇಶ್, ಕಾರ್ಯದರ್ಶಿ ಎಸ್.ಕೆ ಮೋಹನ್, ಖಜಾಂಚಿ ಕೆ.ಆರ್ ಪ್ರಶಾಂತ್ ಹಾಗೂ ವಿದ್ಯಾಸಂಸ್ಥೆ ಎಲ್ಲಾ ಪದಾಧಿಕಾರಿಗಳು ಹಾಗೂ ನಿರ್ದೇಶಕರುಗಳು, ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್, ಮುಖ್ಯ ಶಿಕ್ಷಕರಾದ ಹೇಮಾವತಿ ಮತ್ತು ರೇಣುಕಪ್ಪ ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ವಿದ್ಯಾ ಸಂಸ್ಥೆ ತನ್ನ ಶ್ರೇಷ್ಠತೆ, ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಜೊತೆಗೆ ಮುಂದಿನ ವರ್ಷಗಳಲ್ಲಿಯೂ ಶೈಕ್ಷಣಿಕ ಯಶಸ್ಸನ್ನು ಉತ್ತೇಜಿಸಲು ಬದ್ಧವಾಗಿದೆ ಎಂದು ವಿದ್ಯಾಸಂಸ್ಥೆ ಅಧ್ಯಕ್ಷ ಬಿ. ಸಿದ್ಧಬಸಪ್ಪ ತಿಳಿಸಿದ್ದಾರೆ.
