ಸಿ. ಪೂಜಾ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ೫೭೫ ಅಂಕ


ಸಿ. ಪೂಜಾ 
    ಭದ್ರಾವತಿ:  ನಗರದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕಾಲೇಜಿ(ಬಿಜಿಎಸ್)ನ ವಿದ್ಯಾರ್ಥಿನಿ ಸಿ. ಪೂಜಾ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 
    ಈ ವಿದ್ಯಾರ್ಥಿನಿ ವಿಜ್ಞಾನ ವಿಭಾಗದಲ್ಲಿ ೬೦೦ಕ್ಕೆ ೫೭೫ ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ನಗರಕ್ಕೆ ಕೀರ್ತಿ ತಂದಿದ್ದಾರೆ. ತಾಲೂಕು ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಸಹಕಾರ ಭಾರತಿ ಕಾರ್ಯದರ್ಶಿ ಚಂದ್ರಶೇಖರ್ ಜಾದವ್‌ರವರ ಪುತ್ರಿಯಾಗಿದ್ದಾರೆ. ಸಿ. ಪೂಜಾರವರ ಸಾಧನೆಯನ್ನು ಬಿಜೆಪಿ ಓಬಿಸಿ ಮೋರ್ಚಾ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಅಭಿನಂದಿಸಿವೆ.