ಏ.೧೧ರಂದು ವಿದ್ಯುತ್ ವ್ಯತ್ಯಯ

    

    ಭದ್ರಾವತಿ : ಮೆಸ್ಕಾಂ ನಗರ ಉಪವಿಭಾಗ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.೧೧ರ ಶನಿವಾರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ದಿ ಸದರನ್ ಗ್ಯಾಸ್ ಫ್ಯಾಕ್ಟರಿ, ಜೆಪಿಎಸ್ ಕಾಲೋನಿ, ಕಾಗದನಗರ ೬ನೇ ವಾರ್ಡ್, ಉಜ್ಜನೀಪುರ, ದೊಡ್ಡಗೊಪ್ಪೇನಹಳ್ಳಿ, ಎಂಪಿಎಂ ಅತಿಥಿ ಗೃಹದ ಭಾಗ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.