ಗಾಂಜಾ ಸೇವನೆ ಪ್ರಕರಣ ದಾಖಲು

   

 ಭದ್ರಾವತಿ: ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್ ವೃತ್ತದ ಬಳಿ ಗಾಂಜಾ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಗುರುವಾರ ನಡೆದಿದೆ. 
    ಪೇಪರ್‌ಟೌನ್ ಪೊಲೀಸ್ ಠಾಣೆ ಸಿಬ್ಬಂದಿ ಹಣಮಂತ ಆವಟಿ ಗಸ್ತು ಕರ್ತವ್ಯದಲ್ಲಿದ್ದಾಗ ಮಧ್ಯಾಹ್ನ ೧೨.೩೦ರ ಸಮಯದಲ್ಲಿ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಗಾಂಜಾ ಸೇವಿಸಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಗಾಂಜಾ ಸೇವನೆ ದೃಢಪಟ್ಟಿರುವ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.