ಓ.ಸಿ ಮಟ್ಕಾ ಜೂಜಾಟ : ಪ್ರಕರಣ ದಾಖಲು
ಭದ್ರಾವತಿ : ನಗರದ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಪ್ರೊ. ಬಿ. ಕೃಷ್ಣಪ್ಪ ವೃತ್ತದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಓ.ಸಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಯುವಕನೊಬ್ಬನ ವಿರುದ್ಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ.
ಈ ವ್ಯಾಪ್ತಿಯಲ್ಲಿ ಗಸ್ತು ಕರ್ತವ್ಯದಲ್ಲಿ ತೊಡಗಿದ್ದ ಹೆಡ್‌ಕಾನ್ಸ್‌ಸ್ಟೇಬಲ್ ಗುಳ್ಯಪ್ಪರವರು ಖಚಿತ ಮಾಹಿತಿ ಮೇರೆಗೆ ಏ.೬ರಂದು ಬೆಳಿಗ್ಗೆ ೧೦ ಗಂಟೆ ಸಮಯದಲ್ಲಿ ದಾಳಿ ನಡೆಸಿದ್ದು, ಕೂಲಿಬ್ಲಾಕ್‌ಶೆಡ್ ನಿವಾಸಿ ಸುಮಾರು ೩೦ ವರ್ಷ ವಯಸ್ಸಿನ ಯುವಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಆತನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
