ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಜಯಂತಿ ಅಂಗವಾಗಿ ಉತ್ಸವ ಮೆರವಣಿಗೆ
ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ನಗರದ ಹೊಸಸೇತುವೆ ರಸ್ತೆಯ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಮಂಗಳವಾರ ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು.
ಭದ್ರಾವತಿ : ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ಹೊಸಸೇತುವೆ ರಸ್ತೆಯ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಮಂಗಳವಾರ ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು.
ಶ್ರೀ ಮಠದಲ್ಲಿ ಬೆಳಿಗ್ಗೆ ಪ್ರಾರ್ಥನೆ, ಗಣಪತಿ ಪೂಜೆ, ಪುಣ್ಯಾಹ, ಶ್ರೀ ಶಂಕರಚಾರ್ಯರ ಭಾವಚಿತ್ರದೊಂದಿಗೆ ಉತ್ಸವ ಮೆರವಣಿಗೆ ನಂತರ ಶ್ರೀ ರುದ್ರ ಹೋಮ, ಹೋಮದ ಪೂರ್ಣಾಹುತಿ, ಬ್ರಹ್ಮಚಾರಿ ಪೂಜೆ, ಅನ್ನಪೂರ್ಣೇಶ್ವರಿ ಪೂಜೆ, ಗೋಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿದವು. ಮಠದ ಭಕ್ತರು, ಸೇವಾಕರ್ತರು, ಸ್ಥಳೀಯ ನಿವಾಸಿಗಳು ಉತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
