ನ್ಯಾಯವಾದಿ ಮಗೇಶ್ ಬಾಬು ನಿಧನ
ಮಗೇಶ್ ಬಾಬು
ಭದ್ರಾವತಿ: ನಗರಸಭೆ ವ್ಯಾಪ್ತಿಯ ಜನ್ನಾಪುರ ನಿವಾಸಿ, ನ್ಯಾಯವಾದಿ ಮಗೇಶ್ ಬಾಬು(೫೪) ಶನಿವಾರ ನಿಧನ ಹೊಂದಿದರು.
ಇಬ್ಬರು ಸಹೋದರರು, ಓರ್ವ ಸಹೋದರಿ ಇದ್ದಾರೆ. ಇವರ ಅಂತ್ಯಕ್ರಿಯೆ ಭಾನುವಾರ ಲೋಯರ್ ಹುತ್ತಾ, ದೊಣಬಘಟ್ಟ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಮಗೇಶ್ ಬಾಬು ಈ ಹಿಂದೆ ತಾಲೂಕು ವಕೀಲರ ಸಂಘದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಇವರ ನಿಧನಕ್ಕೆ ತಾಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಸಿ ಕೇಶವಮೂರ್ತಿ ಹಾಗು ಪದಾಧಿಕಾರಿಗಳು, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಎ.ಎನ್ ಕಾರ್ತಿಕ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
