ಡಾ. ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷೆ ಗಂಗಮ್ಮ ನಿಧನ

ಗಂಗಮ್ಮ 
    ಭದ್ರಾವತಿ : ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಮಾಜಿ ಅಧ್ಯಕ್ಷ ದಿವಂಗತ ಕೆ.ಟಿ ಗಿರಿಯಪ್ಪನವರ ಪತ್ನಿ, ಹಳೇ ಸೀಗೇಬಾಗಿ ಡಾ. ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷೆ ಗಂಗಮ್ಮ(೭೬) ಬುಧವಾರ ಸಂಜೆ ನಿಧನ ಹೊಂದಿದರು. 
    ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಮಹಿಳಾ ಘಟಕದ ಅಧ್ಯಕ್ಷೆ ವಾಣಿ ಸೇರಿದಂತೆ ನಾಲ್ವರು ಪುತ್ರಿಯರಿದ್ದಾರೆ. ಗಂಗಮ್ಮ ಕೆ.ಟಿ ಗಿರಿಯಪ್ಪನವರ ನಿಧನದ ನಂತರ ಡಾ. ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್ ಹಾಗು ರಾಜೀವ್ ಗಾಂಧಿ ಬಿ.ಇಡಿ ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. 
    ಗಂಗಮ್ಮನವರ ನಿಧನಕ್ಕೆ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕದ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ಡಾ. ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್ ಹಾಗು ರಾಜೀವ್ ಗಾಂಧಿ ಬಿ.ಇಡಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿದ್ದಾರೆ.