ಓ.ಸಿ ಮಟ್ಕಾ ಜೂಜಾಟ : ಪ್ರಕರಣ ದಾಖಲು
ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಹೋಗುವ ರಸ್ತೆಯಲ್ಲಿ ಓ.ಸಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಗುರುವಾರ ನಡೆದಿದೆ.
ನ್ಯೂಟೌನ್ ಪೊಲೀಸ್ ಠಾಣೆ ಸಿಬ್ಬಂದಿ ಗುಳ್ಯಪ್ಪ ಮಧ್ಯಾಹ್ನ ೧.೩೦ರ ಸಮಯದಲ್ಲಿ ಗಸ್ತು ಕರ್ತವ್ಯದಲ್ಲಿದ್ದಾಗ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಓ.ಸಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
