ಕನಕ ವಿದ್ಯಾಸಂಸ್ಥೆಗೆ ಶೇ.೯೯ರಷ್ಟು ಫಲಿತಾಂಶ


    ಭದ್ರಾವತಿ : ಹಳೇನಗರದ ಬಸವೇಶ್ವರ ವೃತ್ತದ ತಾಲೂಕು ಕುರುಬರ ಸಂಘ ಆಶ್ರಿತದ ಶ್ರೀ ಕನಕ ವಿದ್ಯಾ ಸಂಸ್ಥೆಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೯೯ರಷ್ಟು ಫಲಿತಾಂಶ ಪಡೆದುಕೊಂಡಿದೆ. 
    ಶಾಲೆಯ ೧೩ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, ೪೯ ವಿದ್ಯಾರ್ಥಿಗಳು ಉತ್ತಮ ಶ್ರೇಣಿ ಹಾಗು ೮ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಹೆಚ್ಚಿನ ಅಂಕಗಳೊಂದಿಗೆ ಉತ್ತಮ ಫಲಿತಾಂಶಕ್ಕೆ ಕಾರಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗು ಸಿಬ್ಬಂದಿ ವರ್ಗ ಮತ್ತು ಶಾಲೆಯ ಆಡಳಿತ ಮಂಡಳಿ ಹಾಗು ಪೋಷಕರು ಅಭಿನಂದಿಸಿದ್ದಾರೆ.