ಹೋರಾಟಗಾರ ಐ.ಎಲ್ ಅರುಣ್ ಕುಮಾರ್ ನಿಧನ
ಐ.ಎಲ್ ಅರುಣ್ ಕುಮಾರ್
ಭದ್ರಾವತಿ : ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ನಿವಾಸಿ, ಹಿರಿಯ ಹೋರಾಟಗಾರ ಐ.ಎಲ್ ಅರುಣ್ ಕುಮಾರ್(೭೪) ಬುಧವಾರ ರಾತ್ರಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅರುಣ್ ಕುಮಾರ್ ಪ್ರಗತಿಪರ ಹಾಗು ಕನ್ನಡಪರ ಹೋರಾಟಗಾರರಾಗಿದ್ದರು. ಈ ಹಿಂದೆ ಪತ್ರಿಕಾ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದರು. ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಕಾರ್ಯಾಧ್ಯಕ್ಷರಾಗಿದ್ದರು.
ಇವರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಜಟ್‌ಪಟ್ ನಗರದ ಕ್ರೈಸ್ತ ಸಮಾಧಿಯಲ್ಲಿ ನೆರವೇರಿತು. ಇವರ ನಿಧನಕ್ಕೆ ಮಾನವ ಹಕ್ಕುಗಳ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
