ಶಾಂತಿ, ಸೌಹಾರ್ದತೆಗಾಗಿ ಕ್ರೈಸ್ತರಿಂದ `ರನ್ ಫಾರ್ ಜೀಸಸ್'

ಯೂನಿಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ವತಿಯಿಂದ ಶುಭ ಶುಕ್ರವಾರ (ಗುಡ್ ಫ್ರೈಡೆ) ಮತ್ತು ಪುನರುತ್ಥಾನ (ಈಸ್ಟರ್) ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿ ಸಹ ಶಾಂತಿ ಮತ್ತು ಸೌಹಾರ್ದತೆಗಾಗಿ ಶನಿವಾರ ಭದ್ರಾವತಿ ನಗರದಲ್ಲಿ `ರನ್ ಫಾರ್ ಜೀಸಸ್' ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಭದ್ರಾವತಿ: ಯೂನಿಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ವತಿಯಿಂದ ಶುಭ ಶುಕ್ರವಾರ (ಗುಡ್ ಫ್ರೈಡೆ) ಮತ್ತು ಪುನರುತ್ಥಾನ (ಈಸ್ಟರ್) ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿ ಸಹ ಶಾಂತಿ ಮತ್ತು ಸೌಹಾರ್ದತೆಗಾಗಿ ಶನಿವಾರ ನಗರದಲ್ಲಿ ಆಯೋಜಿಸಲಾಗಿದ್ದ `ರನ್ ಫಾರ್ ಜೀಸಸ್' ಕಾರ್ಯಕ್ರಮಕ್ಕೆ ತಾಲೂಕಿನ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ರೈಟ್ ರೆವೆರೆಂಡ್ ಡಾ. ಜೋಸೆಫ್ ಅರಮಚ್ಚಾದತ್ ಚಾಲನೆ ನೀಡಿದರು. 
    ಆರಂಭದಲ್ಲಿ ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾನವ ಕುಲಕ್ಕೆ ಯೇಸು ಕ್ರಿಸ್ತರ ತ್ಯಾಗ, ಬಲಿದಾನ ಸ್ಮರಿಸಲಾಯಿತು. 
ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತ ಮೂಲಕ ಕನಕಮಂಟಪ ಮೈದಾನದವರೆಗೂ `ರನ್ ಫಾರ್ ಜೀಸಸ್' ನಡೆಯಿತು. ಪ್ರಮುಖ ವೃತ್ತಗಳಲ್ಲಿ ಯೇಸು ಕ್ರಿಸ್ತರ ಜೀವನ ಚರಿತ್ರೆ ಹಾಗು ಮರಣದ ಕೊನೆಯ ಕ್ಷಣಗಳ ದೃಶ್ಯಗಳನ್ನು ನಾಟಕದ ಮೂಲಕ ಪ್ರದರ್ಶಿಸಲಾಯಿತು. ಅಲ್ಲದೆ ಮಧ್ಯಪ್ರಾಚ್ಯ ರಾಷ್ಟ್ರ(ಕೊಲ್ಲಿ ರಾಷ್ಟ್ರಗಳು)ಗಳಲ್ಲಿ ನಡೆಯುತ್ತಿರುವ ಯುದ್ಧ ಅಂತ್ಯಗೊಂಡು ಶಾಂತಿ ನೆಲೆಗೊಳ್ಳುವಂತೆ ಧರ್ಮಗುರುಗಳ ನೇತೃತ್ವದಲ್ಲಿ ಪ್ರಾರ್ಥಿಸಲಾಯಿತು
    ಯೂನಿಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್ ಮತ್ತು ವೈಎಂಸಿಎ ಅಧ್ಯಕ್ಷ ಆರ್. ಮೋಸಸ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಲಾಗಿತ್ತು. ನಗರಸಭೆ ಸದಸ್ಯರಾದ ಜಾರ್ಜ್, ವಿಲ್ಸನ್ ಬಾಬು, ಎಂ.ಜಿ ರಾಮಚಂದ್ರ,, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಫ್ರಾನ್ಸಿಸ್, ನಗರ ಆಶ್ರಯ ಸಮಿತಿ ಸದಸ್ಯ ವೆಂಕಟೇಶ್ ಇಮಾನ್ಯುವೇಲ್, ವಿವಿಧ ಕ್ರೈಸ್ತ ದೇವಾಲಯಗಳ ಧರ್ಮಗುರುಗಳು, ಧರ್ಮಭಗಿನಿಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗು ಕ್ರೈಸ್ತ ಸಮುದಾಯದವರು ಪಾಲ್ಗೊಂಡಿದ್ದರು.
 

ಯೂನಿಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ವತಿಯಿಂದ ಶುಭ ಶುಕ್ರವಾರ (ಗುಡ್ ಫ್ರೈಡೆ) ಮತ್ತು ಪುನರುತ್ಥಾನ (ಈಸ್ಟರ್) ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿ ಸಹ ಶಾಂತಿ ಮತ್ತು ಸೌಹಾರ್ದತೆಗಾಗಿ ಶನಿವಾರ ಭದ್ರಾವತಿ ನಗರದಲ್ಲಿ ಆಯೋಜಿಸಲಾಗಿದ್ದ `ರನ್ ಫಾರ್ ಜೀಸಸ್' ಕಾರ್ಯಕ್ರಮದಲ್ಲಿ ಯೇಸು ಕ್ರಿಸ್ತರ ಜೀವನ ಚರಿತ್ರೆ ಹಾಗು ಮರಣದ ಕೊನೆಯ ಕ್ಷಣಗಳ ದೃಶ್ಯಗಳನ್ನು ನಾಟಕದ ಮೂಲಕ ಪ್ರದರ್ಶಿಸಲಾಯಿತು.