ಹುತ್ತಾ ಕಾಲೋನಿ ಸರ್ಕಾರಿ ಪ್ರೌಢಶಾಲೆಗೆ ಸತತ ೨ನೇ ಬಾರಿಗೆ



ಭದ್ರಾವತಿ ನಗರಸಭೆ ವ್ಯಾಪ್ತಿಯ ಹುತ್ತಾ ಕಾಲೋನಿ ಸರ್ಕಾರಿ ಪ್ರೌಢಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದುಕೊಂಡು ಉತ್ತಮ ಸಾಧನೆ ಮಾಡಿದೆ. 
    ಭದ್ರಾವತಿ : ನಗರಸಭೆ ವ್ಯಾಪ್ತಿಯ ಹುತ್ತಾ ಕಾಲೋನಿ ಸರ್ಕಾರಿ ಪ್ರೌಢಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದುಕೊಂಡು ಉತ್ತಮ ಸಾಧನೆ ಮಾಡಿದೆ. 
    ಗುಣಾತ್ಮಕ ಫಲಿತಾಂಶದಲ್ಲಿ ಎ ಗ್ರೇಡ್ ಪಡೆದಿದ್ದು, ಈ ಶಾಲೆ ಸತತ ಎರಡನೇ ಬಾರಿಗೆ ಶೇ. ೧೦೦ರಷ್ಟು ಫಲಿತಾಂಶ ಪಡೆಯುವ ಮೂಲಕ ಗಮನ ಸೆಳೆದಿದೆ. ಉತ್ತಮ ಫಲಿತಾಂಶ ಪಡೆಯಲು ಕಾರಣಕರ್ತರಾದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಪೋಷಕರಿಗೆ ಮತ್ತು ಶಾಲಾಭಿವೃದ್ಧಿ ಸಮಿತಿಗೆ, ಹಿರಿಯ ವಿದ್ಯಾರ್ಥಿಗಳಿಗೆ ಹಾಗು ಜನಪ್ರತಿನಿಧಿಗಳಿಗೆ ಶಾಲೆಯ ಮುಖ್ಯ ಶಿಕ್ಷಕರು ಕೃತಜ್ಞತೆ ಸಲ್ಲಿಸಿದ್ದು, ಮುಂಬರುವ ವರ್ಷಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲು ಶಕ್ತಿ ಮೀರಿ ಶ್ರಮಿಸುವುದಾಗಿ ತಿಳಿಸಿದ್ದಾರೆ.