ಪಿಯುಸಿ ಪರೀಕ್ಷೆ : ವಿಇಎಸ್ ಕಾಲೇಜಿಗೆ ಉತ್ತಮ ಫಲಿತಾಂಶ
ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪಿಯು ಕಾಲೇಜು ವಿದ್ಯಾರ್ಥಿಗಳು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ವಿಶ್ವೇಶ್ವರಾಯ ವಿದ್ಯಾಸಂಸ್ಥೆ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದ್ದು, ಈ ಬಾರಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಪೈಕಿ ೪೧ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, ೯೫ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗು ೧೪ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿಯರಾದ ನೂರ್ ಫಾತಿಮಾ(೫೮೩), ಬ್ಯೂಲ ಸುಪ್ರೀತಿ(೫೭೧), ಪಿ. ರಮ್ಯಾ(೫೬೬), ಗೀತಾ(೫೬೦), ಅಲ್ಫಿಯಾ ನಜ್ಮೀನ್(೫೫೮) ಹಾಗೂ ವಾಣಿಜ್ಯ ವಿಭಾಗದಲ್ಲಿ ಎಚ್. ನಂದಿತ(೫೭೬), ಆಲಿಯಾ ಖಾನಮ್(೫೬೮), ಎನ್. ಸಂಜನ(೫೫೧), ಪ್ರತೀಕ್ಷ(೫೫೦) ಮತ್ತು ಸರ್ವೋತ್ತಮ್ ಚಕ್ರವರ್ತಿ(೫೫೦) ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ವಿದ್ಯಾಸಂಸ್ಥೆಯ ಉಪನ್ಯಾಸಕರ ಬೋಧನೆ ಮತ್ತು ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ವಿದ್ಯಾಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷ ಬಿ. ಸಿದ್ದಬಸಪ್ಪ, ಕಾರ್ಯಾಧ್ಯಕ್ಷ ಡಾ. ಎಂ. ವೆಂಕಟೇಶ್, ಕಾರ್ಯದರ್ಶಿ ಎಸ್.ಕೆ ಮೋಹನ್, ಖಜಾಂಚಿ ಕೆ.ಆರ್ ಪ್ರಶಾಂತ್ ಹಾಗೂ ವಿದ್ಯಾಸಂಸ್ಥೆಯ ನಿರ್ದೇಶಕರುಗಳು ಹಾಗೂ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್. ವರದರಾಜ್ ಅವರು, ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಹಾಗು ವಿದ್ಯಾಸಂಸ್ಥೆಗೆ ಉತ್ತಮ ಫಲಿತಾಂಶ ಲಭಿಸಲು ಕಾರಣಕರ್ತರಾಗಿರುವ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.
ಡಿ೧೨-ಬಿಡಿವಿಟಿ೧
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭದ್ರಾವತಿ ತಾಲೂಕು ಸಂಘದ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪಿಯು ಕಾಲೇಜು ವಿದ್ಯಾರ್ಥಿಗಳು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
Ananthakumara, Reporter, Kannadaprabha,
NDK/31A, Near, Sri Satyasayi Baba school,
Newtown, Bhadravathi:-577301(Tq)
Shimoga(Dis)
Mob: 9738801478
: 9482007466