ಭಾರ ಎತ್ತುವ ಸ್ಪರ್ಧೆಯಲ್ಲಿ ಸಹ ಪ್ರಾಧ್ಯಾಪಕ ಶಿವರುದ್ರಪ್ಪರಿಗೆ 11ನೇ ಬಾರಿ ಚಿನ್ನದ ಪದಕ




ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸರ್ಕಾರಿ ನೌಕರರಿಗಾಗಿ ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭದ್ರಾವತಿ ನಗರದ ನ್ಯೂಟೌನ್ ನಿವಾಸಿ, ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಎಚ್.ಎಸ್ ಶಿವರುದ್ರಪ್ಪ ಭಾರ ಎತ್ತುವ ಸ್ಪರ್ಧೆ(ಪವರ್ ಲಿಫ್ಟಿಂಗ್) ಚಿನ್ನದ ಪದಕ ಪಡೆದುಕೊಂಡಿದ್ದಾರೆ.
    ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸರ್ಕಾರಿ ನೌಕರರಿಗಾಗಿ ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ನಗರದ ನ್ಯೂಟೌನ್ ನಿವಾಸಿ, ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಎಚ್.ಎಸ್ ಶಿವರುದ್ರಪ್ಪ ಭಾರ ಎತ್ತುವ ಸ್ಪರ್ಧೆ(ಪವರ್ ಲಿಫ್ಟಿಂಗ್) ಚಿನ್ನದ ಪದಕ ಪಡೆದುಕೊಂಡಿದ್ದಾರೆ.
    ಶಿವರುದ್ರಪ್ಪರವರು ವೈಯಕ್ತಿಕ ವಿಭಾಗದಲ್ಲಿ 105 ಕೆ.ಜಿ ಭಾರ ಎತ್ತುವ ಮೂಲಕ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಇವರು ಭಾರ ಎತ್ತುವ ಸ್ಪರ್ಧೆಯಲ್ಲಿ 11ನೇ ಬಾರಿಗೆ ಚಿನ್ನದ ಪದಕ ಪಡೆದಿರುವುದು ವಿಶೇಷವಾಗಿದ್ದು, ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ.
    ಶಿವರುದ್ರಪ್ಪರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ, ನಗರದ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು, ಕಾಲೇಜು ಆಡಳಿತ ಮಂಡಳಿ ಹಾಗು ಗಣ್ಯರು ಅಭಿನಂದಿಸಿದ್ದಾರೆ.