ವಿಜೃಂಭಣೆಯಿಂದ ಜರುಗಿದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ
ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿಯವರ ಬ್ರಹ್ಮರಥೋತ್ಸವ ಮೇ.೧ರ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ಭದ್ರಾವತಿ : ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿಯವರ ಬ್ರಹ್ಮರಥೋತ್ಸವ ಮೇ.೧ರ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ಪ್ರತಿ ವರ್ಷದಂತೆ ಈ ಬಾರಿ ಸಹ ಮಧ್ಯಾಹ್ನ ಸುಮಾರು ೧೨.೩೦ರ ಸಮಯದಲ್ಲಿ ದೇವಸ್ಥಾನದಿಂದ ಆರಂಭಗೊಂಡ ರಥೋತ್ಸವ ರಥ ಬೀದಿ ರಸ್ತೆಯಲ್ಲಿ ಸಾಗಿ ಪುನಃ ದೇವಸ್ಥಾನ ಬಂದು ತಲುಪಿತು. ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಸಹಸ್ರರಾರು ಭಕ್ತರು ಸ್ವಾಮಿಗೆ ಜಯಘೋಷಗಳನ್ನು ಹಾಕಿ ರಥ ಎಳೆದು ಭಕ್ತಿ ಸಮರ್ಪಿಸಿದರು. ವಿವಿಧ ಭಜನಾ ಮಂಡಳಿಗಳ ಸದಸ್ಯರಿಂದ ಭಜನೆ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ರಂಗನಾಥಶರ್ಮ ಹಾಗು ಸಹಾಯಕ ಅರ್ಚಕರಾದ ಶ್ರೀ ಶ್ರೀನಿವಾಸನ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಜಿ. ರಮಾಕಾಂತ ಹಾಗು ಮುಜರಾಯಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸೇರಿದಂತೆ ನಗರದ ವಿವಿಧೆಡೆಗಳಿಂದ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು.
